More

    21ರಿಂದ ರಸ್ತೆ ಸುರಕ್ಷತಾ ಸಪ್ತಾಹ ಆಯೋಜನೆ – ಜಿಲ್ಲಾಧಿಕಾರಿ ಹಿರೇಮಠ

    ಬೆಳಗಾವಿ: ರಸ್ತೆ ಬಳಕೆದಾರರಲ್ಲಿ ಹಾಗೂ ವಾಹನ ಚಾಲಕರಲ್ಲಿ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಡಿ. 21ರಿಂದ ರಸ್ತೆ ಸುರಕ್ಷತಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ರಸ್ತೆ ಸುರಕ್ಷತಾ ಸಪ್ತಾಹದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿರಂತರವಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಹೀಗಾಗಿ ಅಪಘಾತ ಸಂಖ್ಯೆ ಕಡಿಮೆಯಾಗುತ್ತಿದೆ ಎಂದರು.

    ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೊಟಗೋಡಿ ಗ್ರಾಮದ ಕನ್ನಡ ಜಾನಪದ ಶಿಕ್ಷಣ ಸಂಸ್ಥೆಯು ಹಲವು ಉತ್ತಮ ಕೆಲಸ ಮಾಡುತ್ತಿದ್ದು, ಅವರ ಕಾರ್ಯ ಶ್ಲಾಘನೀಯ. ಹಾಗಾಗಿ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಭಾಗವಹಿಸಿ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ಸೂಚಿಸಿದರು. ರಸ್ತೆ ಸುರಕ್ಷತಾ ಸಪ್ತಾಹದ ಉದ್ಘಾಟನೆ ಸಮಾರಂಭ ಡಿ. 21ರಂದು ಬೆಳಗ್ಗೆ 10 ಗಂಟೆಗೆ ಚನ್ನಮ್ಮ ವೃತ್ತದಲ್ಲಿ ನಡೆಯಲಿದೆ.

    ಚನ್ನಮ್ಮ ವೃತ್ತದಿಂದ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು. ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ, ಡಿಸಿಪಿ ಚಂದ್ರಶೇಖರ ನೀಲಗಾರ, ಹಾವೇರಿ ಜಿಲ್ಲೆ ಗೋಟಗೋಡಿಯ ಕನ್ನಡ ಜಾನಪದ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ವೇದಾರಾಣಿ ದಾಸನೂರ, ಕನ್ನಡ ಜನಪದ ಶಿಕ್ಷಣ ಸಂಸ್ಥೆಯ ಸದಸ್ಯ ಪ್ರಕಾಶ ದಾಸನೂರ, ಸಂಯೋಜಕಿ ರಾಧಾ ಪ್ರದೀಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts