20.4 C
Bengaluru
Monday, January 20, 2020

ಹದಗೆಟ್ಟ ಹೆದ್ದಾರಿ ದುರಸ್ತಿಗೆ ಮಳೆಯೇ ಅಡ್ಡಿ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಮಂಗಳೂರು: ಬಿ.ಸಿ.ರೋಡ್ ಹಾಗೂ ಸುರತ್ಕಲ್ ಮಧ್ಯೆ 37 ಕಿ.ಮೀ. ಭಾಗದಲ್ಲಿ ಕೆಟ್ಟು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸುಧಾರಣಾ ಕಾಮಗಾರಿಗೆ 21 ಕೋಟಿ ರೂ. ಗುತ್ತಿಗೆ ಸಿದ್ಧಗೊಂಡಿದೆ.
37 ಕಿ.ಮೀ.ನಲ್ಲಿ 25 ಕಿ.ಮೀ ಭಾಗದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗುವುದು. ಈಗಾಗಲೇ ಗುತ್ತಿಗೆದಾರರನ್ನು ಅಂತಿಮಗೊಳಿಸಲಾಗಿದ್ದು, ಲೆಟರ್ ಆಫ್ ಇಂಟೆಂಟ್ ಹಸ್ತಾಂತರಿಸಲಾಗಿದೆ. ಮಳೆ ನಿಂತ ಕೂಡಲೇ ಕಾಮಗಾರಿ ಆರಂಭಕ್ಕೆ ಸಿದ್ಧತೆ ಆಗಿದೆ. ಸೆಪ್ಟೆಂಬರ್ ತಿಂಗಳಲ್ಲೂ ಮುಂದುವರಿದ ಬಿರುಸಿನ ಮಳೆ ಕಾಮಗಾರಿಗೆ ಅಡ್ಡಿಯಾಗಿದೆ.

ಬಿ.ಸಿ.ರೋಡ್ ಹಾಗೂ ಸುರತ್ಕಲ್ ಮಧ್ಯೆ ಕುಳಾಯಿ ಹೊನ್ನಕಟ್ಟೆ, ಬೈಕಂಪಾಡಿ ಜಂಕ್ಷನ್, ಪಣಂಬೂರು, ಎಂಸಿಎಫ್ ಗೇಟ್ ಸಮೀಪ, ಕೂಳೂರು ಸೇತುವೆ ಕೂಡು ರಸ್ತೆ, ಕೂಳೂರು ಫ್ಲೈಓವರ್ ಕೂಡು ರಸ್ತೆಗಳು, ಕೂಳೂರು ಸರ್ವೀಸ್ ರಸ್ತೆ, ಪಣಂಬೂರು ಬೀಚ್ ಕ್ರಾಸ್, ಕೊಟ್ಟಾರ ಚೌಕಿ, ನಂತೂರು ಜಂಕ್ಷನ್, ಪಡೀಲು ಅಂಡರ್ ಪಾಸ್ ಅಪ್ರೋಚ್, ತುಂಬೆಗಳಲ್ಲಿ ರಸ್ತೆ ತೀರಾ ಹದಗೆಟ್ಟಿದೆ. ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದವರು ಕೇವಲ ವೆಟ್‌ಮಿಕ್ಸ್ ಮೆಕಡಂ(ಜಲ್ಲಿಕಲ್ಲು ಹಾಗೂ ಜಲ್ಲಿಪುಡಿಯ ಮಿಶ್ರಣ) ರಾಶಿಯನ್ನೇ ಗುಂಡಿಗಳಿಗೆ ಸುರಿಯುತ್ತಿದ್ದಾರೆ. ಇದು ಒಂದೆರಡು ದಿನಕ್ಕೇ ಚಲ್ಲಾಪಿಲ್ಲಿಯಾಗಿ ಯಥಾಸ್ಥಿತಿಗೆ ಬರುತ್ತಿದೆ.
21 ಕೋಟಿ ರೂ. ಪ್ಯಾಕೇಜ್‌ನಂತೆ ಹೆದ್ದಾರಿಯ ಗುಂಡಿಗಳನ್ನು ಸಮತಟ್ಟುಪಡಿಸಿ, ಅದರ ಮೇಲೆ ಹೊಸ ಬಿಟುಮಿನಸ್ ಕಾಂಕ್ರೀಟ್ ಲೇಯರ್ ಹಾಕಲಾಗುವುದು. ಅಲ್ಲದೆ ಇಬ್ಬದಿಯಲ್ಲಿರುವ ಚರಂಡಿಗಳನ್ನು ಸರಿಪಡಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ ನಡೆದ ಕೆಲಸ: ಮಂಗಳೂರಿನಲ್ಲಿ ಸೋಮವಾರ ರಾತ್ರಿ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಡೆಯಿಂದ ಸುರತ್ಕಲ್, ಬೈಕಂಪಾಡಿ, ಪಣಂಬೂರು ಮುಂತಾದೆಡೆಗಳಲ್ಲಿ ತಡರಾತ್ರಿಯಿಂದ ನಿರ್ವಹಣಾ ಕೆಲಸ ಕೈಗೊಳ್ಳಲಾಯಿತು.
ಮುಂಜಾನೆ ವರೆಗೂ ಕೆಲಸ ಮಾಡಲಾಗಿದೆ. ತೀರಾ ನಾದುರಸ್ತಿಯಿದ್ದ, ಹೊಂಡಗಳಿದ್ದ ಭಾಗಗಳನ್ನು ಸಮತಟ್ಟುಗೊಳಿಸಿ, ಹೊಂಡಗಳಿಗೆ ಜೆಲ್ಲಿರಾಶಿ ಸುರಿಯಲಾಗಿದೆ. ಬಿಸಿಲು ಶುರುವಾದ ಬಳಿಕವಷ್ಟೇ ಸುಧಾರಣಾ ಕಾಮಗಾರಿ ಶುರುವಾಗುವ ಸಾಧ್ಯತೆ ಇದೆ.

ಟೋಲ್ ಯಥಾಸ್ಥಿತಿ: ಸುರತ್ಕಲ್‌ನ ಮುಕ್ಕ ಟೋಲ್‌ಗೇಟ್ ಮುಚ್ಚುವ ಅಥವಾ ಬೇರೆ ಟೋಲ್‌ಗೇಟ್ ಜೊತೆ ವಿಲೀನಗೊಳಿಸುವ ಪ್ರಸ್ತಾವ ಮುಂದುವರಿದಿಲ್ಲ. ಇದರ ನಡುವೆ ಈ ಟೋಲ್‌ನ ಗುತ್ತಿಗೆಪಡೆದ ಕೇಶವ ಅಗರ್ವಾಲ್ ಅವರ ಗುತ್ತಿಗೆ ಅವಧಿ ನವೆಂಬರ್‌ಗೆ ಮುಗಿಯಲಿದ್ದು, ಮುಂದೆ ನವೀಕರಣವಾಗುವುದೇ ಎಂಬ ಬಗ್ಗೆ ಮಾಹಿತಿ ಇಲ್ಲ.
ಟೋಲ್‌ಗೇಟ್ ವಿಲೀನ ಮಾಡುವುದಕ್ಕೆ ಆಯಾ ಟೋಲ್‌ಗೇಟ್ ಗುತ್ತಿಗೆದಾರರ ವಿರೋಧವಿದೆ, ರದ್ದು ಮಾಡುವುದರಿಂದ ನಷ್ಟ ಎಂದು ಸರ್ಕಾರ ಭಾವಿಸುತ್ತದೆ, ಹಾಗಾಗಿ ಸುಂಕ ಸಂಗ್ರಹ ಮುಂದುವರಿಯುವ ಸಾಧ್ಯತೆಯೇ ಜಾಸ್ತಿ ಎಂದು ಅಧಿಕಾರಿಗಳು ತಿಳಿಸುತ್ತಾರೆ.

ನಾನು ಕೆಲ ತಿಂಗಳ ಹಿಂದೆಯಷ್ಟೇ ಮಂಗಳೂರಿಗೆ ಬಂದಿದ್ದೇನೆ, ಆದರೆ ಜನರಿಗೆ ಆಗುತ್ತಿರುವ ಕಷ್ಟದ ಅರಿವಿದೆ. ಈ ಬಾರಿಯ ಮಳೆ ಮುಂದುವರಿದಿರುವುದರಿಂದ 21 ಕೋಟಿ ರೂ.ನ ಹೆದ್ದಾರಿ ನಿರ್ವಹಣಾ ಕೆಲಸ ಶುರು ಮಾಡಲು ಅಡೆತಡೆಯುಂಟಾಗಿದೆ. ಸದ್ಯಕ್ಕೆ ತಾತ್ಕಾಲಿಕವಾಗಿ ನಿರ್ವಹಣೆ ಕೈಗೊಳ್ಳಲಾಗುತ್ತದೆ, ಮಳೆ ಕಡಿಮೆಯಾದಂತೆಯೇ ಸುರತ್ಕಲ್-ಬಿ.ಸಿ.ರೋಡ್ ಮಧ್ಯೆ ಹೆದ್ದಾರಿ ಸುಧಾರಣೆ ಕೆಲಸ ನಡೆಸಲಾಗುವುದು.
– ಶಿಶುಮೋಹನ್, ಯೋಜನಾ ನಿರ್ದೇಶಕ, ಎನ್‌ಎಚ್‌ಎಐ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...