

ಬೆಂಗಳೂರು: ಸ್ಯಾಂಡಲ್ವುಡ್ನ ರೋರಿಂಗ್ ಸ್ಟಾರ್ ಶ್ರೀ ಮುರಳಿ ಬಘೀರ ಸಿನಿಮಾದ ಶೂಟಿಂಗ್ ವೇಳೆ ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.
ಮದ್ಯಾಹ್ನ ಆಕ್ಷನ್ ಸೀಕ್ವೇನ್ಸ್ ಶೂಟಿಂಗ್ ಮಾಡುವ ವೇಳೆ ಕಾಲಿಗೆ ಸಣ್ಣ ಪೆಟ್ಟಾಗಿದೆ. ಸದ್ಯ ವೈದ್ಯರು ತಪಾಸಣೆ ನಡೆಸಿದ್ದು, ಸರ್ಜರಿ ಮಾಡಿಸಿಕೊಳ್ಳಲು ಸೂಚಿಸಿದ್ದಾರೆ. ಶ್ರೀಮುರಳಿ ಎರಡು ದಿನಗಳ ನಂತರ ಸರ್ಜರಿ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ.
ಮಾಹಿತಿಯ ಪ್ರಕಾರ, ರಾಕ್ ಲೈನ್ ಸ್ಟುಡಿಯೋದಲ್ಲಿ ಆಕ್ಷನ್ ಸೀಕ್ವೇನ್ಸ್ ಶೂಟಿಂಗ್ ವೇಳೆ ಮೊಣಕಾಲಿಗೆ ಗಾಯ ಆಗಿದೆ. ಹೊಂಬಾಳೆ ಬ್ಯಾನರ್ನಲ್ಲಿ ಬರುತ್ತಿರುವ ಬಘೀರ ಸಿನಿಮಾದಲ್ಲಿ ಶ್ರೀಮುರಳಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ಬಘೀರ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.