ಪೆಟ್ರೋಲ್ ಬಂಕ್‌ನಲ್ಲಿ ದರೋಡೆ

  • ಕೆ.ಆರ್.ಪೇಟೆ: ತಾಲೂಕಿನ ಸೋಮನಹಳ್ಳಿ ಗ್ರಾಮದ ರಾಘವೇಂದ್ರ ಪೆಟ್ರೋಲ್ ಬಂಕ್‌ಗೆ ಸೋಮವಾರ ರಾತ್ರಿ ಗ್ರಾಹಕರ ಸೋಗಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಬಂಕ್‌ನ ನೌಕರನಿಗೆ ಲಾಂಗ್‌ನಿಂದ ಹಲ್ಲೆ ಮಾಡಿ, ಆತನ ಬಳಿಯಿದ್ದ ಹಣ ಕುಸಿದು ಪರಾರಿಯಾಗಿದ್ದಾರೆ.
  • ಹಲ್ಲೆಯಿಂದ ಗಾಯಗೊಂಡಿದ್ದ ಪೆಟ್ರೋಲ್ ಬಂಕ್‌ನ ನೌಕರ ಹರೀಶ್(25) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗ್ರಾಮದ ಹೊರವಲಯದಲ್ಲಿರುವ ಪೆಟ್ರೋಲ್ ಬಂಕ್‌ಗೆ ರಾತ್ರಿ 11.30ಕ್ಕೆ ಎರಡು ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಬೈಕ್‌ಗೆ ಪೆಟ್ರೋಲ್ ಹಾಕಿಸಿಕೊಂಡಿದ್ದಾರೆ. ಬಳಿಕ ಹಣ ನೀಡದೆ ಲಾಂಗ್‌ನಿಂದ ನೌಕರನಿಗೆ ಹಲ್ಲೆ ನಡೆಸಿ, ಆತನ ಬಳಿಯಿದ್ದ ಹಣವನ್ನೂ ಕಸಿದು ಕಾಲ್ಕಿತ್ತಿದ್ದಾರೆ. ಲಾಂಗ್‌ನಲ್ಲಿ ಹಲ್ಲೆ ನಡೆಸಿದ ದೃಶ್ಯ ಬಂಕ್‌ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
  • ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಬಲೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *