VIDEO|ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಎರಡನೇ ಲುಕ್​ಮೋಷನ್ ಪೋಸ್ಟರ್ ಅನಾವರಣ

blank

ಬೆಂಗಳೂರು: ಡಿ ಬಾಸ್ ಎಂದೇ ಅಭಿಮಾನಿ ವಲಯದಲ್ಲಿ ಗುರುತಿಸಿಕೊಂಡಿರುವ ನಟ ದರ್ಶನ್ ಅವರ ಬಹುನಿರೀಕ್ಷೆಯ ರಾಬರ್ಟ್​ ಸಿನಿಮಾದ ಎರಡನೇ ಲುಕ್​ಮೋಷನ್​ ಪೋಸ್ಟರ್ ಸಂಕ್ರಾಂತಿ ಹಬ್ಬದಂದು ಅನಾವರಣಗೊಂಡಿದೆ.

ರಾಮಲೀಲಾದ ಕೊನೆಯ ಭಾಗದ ಚಿತ್ರಣದೊಂದಿಗೆ ಮೋಷನ್ ಪೋಸ್ಟರ್ ಆರಂಭವಾಗುತ್ತದೆ. ಶ್ರೀರಾಮನ ಹಾಡು ಹಿನ್ನೆಲೆಯಲ್ಲಿ ಕೇಳುತ್ತಿದ್ದು, ಆಂಜನೇಯನ ಅವತಾರದಲ್ಲಿ ದರ್ಶನ್ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ರೋಮಾಂಚನಕ್ಕೆ ಕಾರಣವಾಗಿದ್ದಾರೆ.

ಆನಂದ್ ಆಡಿಯೋದ ಯೂಟ್ಯೂಬ್ ಪೇಜ್​ನಲ್ಲಿ ಇದು ಅಪ್ಲೋಡ್ ಆಗಿದ್ದು, ಅರ್ಧಗಂಟೆಯೊಳಗೆ 2.5 ಲಕ್ಷದಷ್ಟು ವೀಕ್ಷಣೆಯನ್ನು ಕಂಡಿದೆ. ಚಿತ್ರದ ಮುಖ್ಯಭೂಮಿಕೆಯಲ್ಲಿ ದರ್ಶನ್ ಜತೆಗೆ ವಿನೋದ್ ಪ್ರಭಾಕರ್, ಆಶಾ ಭಟ್​, ಜಗಪತಿ ಬಾಬು, ರವಿ ಕಿಶನ್ ಮತ್ತಿತರರು ನಟಿಸುತ್ತಿದ್ದಾರೆ.

ಉಮಾಪತಿ ಫಿಲಂಸ್ ಬ್ಯಾನರ್​ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಉಮಾಪತಿ ಶ್ರೀನಿವಾಸ್ ನಿರ್ಮಾಪಕರು. ತರುಣ್ ಕಿಶೋರ್ ಸುಧೀರ್ ನಿರ್ದೇಶನದ ಈ ಸಿನಿಮಾದಲ್ಲಿ ಅರ್ಜುನ್ ಜನ್ಯ ಸಂಗೀತ ನಿರ್ದೇಶಿಸಿದ್ದಾರೆ.

Share This Article

ಟಾಯ್ಲೆಟ್​​ನ ಕೊಳಕು ವಾಸನೆ, ಹಳದಿ ಕಲೆ ತೆಗೆದುಹಾಕುವುದೇಗೆ?; ಇಲ್ಲಿದೆ ಸಿಂಪಲ್​ ವಿಧಾನ | Tips

ಮನೆಯನ್ನು ಸ್ವಚ್ಛಗೊಳಿಸಲು ಮತ್ತು ಅಲಂಕರಿಸಲು ಜನರು ಶ್ರಮಿಸುತ್ತಾರೆ. ಹೊರಗಿನಿಂದ ಅವರ ಮನೆಯು ಸಾಕಷ್ಟು ಐಷಾರಾಮಿಯಾಗಿ ಕಾಣುತ್ತದೆ.…

ಚಳಿಗಾಲದಲ್ಲಿ ಬಿಸಿ ಚಹಾ ಮತ್ತು ಕಾಫಿ ಸೇವಿಸುತ್ತಿದ್ದೀರಾ; ಅಪಾಯ ತಪ್ಪಿದಲ್ಲ.. ಎಚ್ಚರದಿಂದಿರಿ | Health Tips

ಚಳಿಗಾಲ ಬಂದ ಕೂಡಲೆ ಟೀ, ಕಾಫಿ ಸೇವನೆ ಹೆಚ್ಚುತ್ತದೆ. ಈ ಬಿಸಿ ಪಾನೀಯವು ದೇಹಕ್ಕೆ ಶಾಖವನ್ನು…

ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…