ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದ ರಾಬಿನ್ ಉತ್ತಪ್ಪ!

kohli -uthappa web
Published on

ಬೆಂಗಳೂರು: ಐಪಿಎಲ್ 13ನೇ ಆವೃತ್ತಿಯಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ ಅವರು ರಾಜಸ್ಥಾನ ರಾಯಲ್ಸ್ ತಂಡದ ಪರ ಆಡುತ್ತಿದ್ದಾರೆ. ಟೂರ್ನಿಯಲ್ಲಿ ಅವರಿಂದ ಇದುವರೆಗೆ ನಿರೀಕ್ಷಿತ ನಿರ್ವಹಣೆ ಬಂದಿಲ್ಲ. ಇದರ ನಡುವೆ ಅವರು, ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದ್ದ ಅನಪೇಕ್ಷಿತ ದಾಖಲೆಯೊಂದನ್ನು ಮುರಿದಿದ್ದಾರೆ.

ಕೋಲ್ಕತ ನೈಟ್‌ರೈಡರ್ಸ್‌ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಸೋಲು ಕಾಣುವುದರೊಂದಿಗೆ ರಾಬಿನ್ ಉತ್ತಪ್ಪ ಅವರು ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅನಪೇಕ್ಷಿತ ದಾಖಲೆಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡರು. ಅದುವೇ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ ಸೋಲು ಕಂಡ ತಂಡದ ಭಾಗವಾಗಿರುವುದು!

ರಾಬಿನ್ ಉತ್ತಪ್ಪ ಅವರು ಐಪಿಎಲ್‌ನಲ್ಲಿ 91ನೇ ಸೋಲು ಎದುರಿಸಿದರು. ಇದರಿಂದಾಗಿ 90 ಸೋಲು ಕಂಡಿರುವ ವಿರಾಟ್ ಕೊಹ್ಲಿ ಅವರ ಹೆಸರಿನ ಅನಪೇಕ್ಷಿತ ದಾಖಲೆ ಈಗ ಉತ್ತಪ್ಪ ಅವರ ಹೆಸರಿಗೆ ಸೇರಿದೆ. ಕೆಕೆಆರ್ ತಂಡದ ನಾಯಕ ದಿನೇಶ್ ಕಾರ್ತಿಕ್ 87 ಸೋಲಿನೊಂದಿಗೆ ಅನಂತರದ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮ 85 ಪಂದ್ಯಗಳಲ್ಲಿ ಸೋಲು ಎದುರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net