More

    ರಾಕ್‌ಗಾರ್ಡನ್ ಉದ್ಘಾಟನೆ ಶೀಘ್ರ

    ಬೈಲಹೊಂಗಲ: ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಕ್‌ಗಾರ್ಡನ್ ಉದ್ಘಾಟಿಸಲಿದ್ದಾರೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

    ತಾಲೂಕಿನ ಸಂಗೊಳ್ಳಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಸೈನಿಕ ಶಾಲೆಯ ಮಕ್ಕಳಲ್ಲಿ ಕೇವಲ ಅಕ್ಷರ ಬೀಜ ಬಿತ್ತದೆ, ರಾಷ್ಟ್ರೀಯ ಏಕತೆ, ಸಮಗ್ರತೆ, ದೇಶಭಕ್ತಿ, ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವುದನ್ನೂ ಕಲಿಸಿಕೊಡಲಾಗುತ್ತಿದೆ. ಹಾಗೆಯೇ ಬೇರೆಯವರತ್ತ ಬೆರಳು ಮಾಡದೆ ತನ್ನ ಬದ್ಧತೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತಹ ಶಿಕ್ಷಣ ನೀಡಲಾಗುತ್ತದೆ ಎಂದರು.

    ಶಾಲೆಯಲ್ಲಿನ ಮೂಲಭೂತ ಸೌಲಭ್ಯ, ಗುಣಮಟ್ಟದ ಶಿಕ್ಷಣದ ಬಗ್ಗೆ ಮಾಹಿತಿ ಪಡೆದರು. ಶಾಲೆಯ ಭೋಜನಾಲಯ, ಗ್ರಂಥಾಲಯ, ಶಿಕ್ಷಕರ ವಸತಿ ಗಹ, ಆಡಿಟೋರಿಯಂ ಹಾಗೂ ಕೆಲಸಗಾರರು ಉಳಿದುಕೊಳ್ಳಲು ಹೈಟೆಕ್ ವಸತಿ ಗಹ, 30 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಿರುವ ಬಹತ್ ಒಳಾಂಗಣ ಮತ್ತು ಹೊರಾಂಗಣದಲ್ಲಿ ಬರುವ ಈಜುಕೊಳ, ಹಾರ್ಸ್ ರೈಡಿಂಗ್, ಹಾಕಿ, ಕಬಡ್ಡಿ, ವಾಲಿಬಾಲ್ ಕೋರ್ಟ್ ಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು.

    6ನೇ ತರಗತಿಯಿಂದ 12ನೇ ತರಗತಿವರೆಗೆ ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಅವಕಾಶವಿದ್ದು, ಕೇಂದ್ರ ರಕ್ಷಣಾ ಇಲಾಖೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸುತ್ತದೆ. ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇಲ್ಲಿನ ಶಿಕ್ಷಕರಿಗೆ ಮೈಸೂರಿನಲ್ಲಿರುವ ರಿಜಿನಲ್ ಕಾಲೇಜ್ ಆ್ ಎಜುಕೇಷನ್ ಸಂಸ್ಥೆಯಿಂದ ವಿಶೇಷ ತರಬೇತಿ ಕೊಡಿಸಲಾಗುತ್ತದೆ ಎಂದು ಇಲಾಖಾ ಕಾರ್ಯದರ್ಶಿ ತುಳಸಿ ಮದ್ದಿನೇನಿ ಸಚಿವರಿಗೆ ವಿವರಿಸಿದರು.
    ಶಾಸಕ ಮಹಾಂತೇಶ ಕೌಜಲಗಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿವದ್ಧಿ ಪ್ರಾಧಿಕಾರದ ಆಯುಕ್ತ ಮಲ್ಲೇಶಪ್ಪ ಹೊರಪೇಟ, ಸೈನಿಕ ಶಾಲೆ ಪ್ರಾಂಶುಪಾಲ ಕೆ.ಟಿ.ಕರಮಚಂದನ, ಅಧಿಕಾರಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts