ಯಶ್‌​​ ಹುಟ್ಟುಹಬ್ಬ ಆಚರಿಸಿಕೊಳ್ಳದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿ ಸಾವು!

ಬೆಂಗಳೂರು: ರಾಕಿಂಗ್​ ಸ್ಟಾರ್ ಯಶ್​ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳದಿದ್ದದ್ದಕ್ಕೆ ನೊಂದು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿ ಮೃತಪಟ್ಟಿದ್ದಾನೆ.

ಯಶ್ ಅವರ ಹೊಸಕೆರೆಹಳ್ಳಿ ಮನೆ ಮುಂಭಾಗದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಗಾಯಾಳು ರವಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಧಿಕ ಸುಟ್ಟ ನೋವುಗಳಿಂದ ಬಳಲುತ್ತಿದ್ದ ರವಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 1.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾನೆ.

ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರವಿ ಮೃಹದೇಹವನ್ನಿಟ್ಟಿದ್ದು, ಪೋಲಿಸ್‌ ಸ್ಟೇಷನ್‌ನಿಂದ ದೂರು ಕೊಟ್ಟು ಬಂದ ನಂತರ ಮೃತದೇಹವನ್ನು ಕುಟುಂಬಸ್ಥರು ತೆಗೆದುಕೊಂಡು ಹೋಗಲಿದ್ದಾರೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ ರೆಬೆಲ್​ಸ್ಟಾರ್​ ಅಂಬರೀಷ್ ಮೃತಪಟ್ಟಿದ್ದರಿಂದಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಯಶ್‌ ನಿರಾಕರಿಸಿದ್ದರು. ಅಂಬರೀಷ್​ ಅವರಿಗೆ ಗೌರವ ಸೂಚಿಸಲೆಂದೇ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನಟ ಯಶ್​ ನಿನ್ನೆ ವಿಡಿಯೋವನ್ನು ಹಂಚಿಕೊಂಡಿದ್ದರು. (ದಿಗ್ವಿಜಯ ನ್ಯೂಸ್)

One Reply to “ಯಶ್‌​​ ಹುಟ್ಟುಹಬ್ಬ ಆಚರಿಸಿಕೊಳ್ಳದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿ ಸಾವು!”

Comments are closed.