More

    ಸರ್ಕಾರಿ ಅಧಿಕಾರಿಗಳ ಕಿತ್ತಾಟ: ಡಿ. ರೂಪಾಗೆ ರೋಹಿಣಿ ಸಿಂಧೂರಿ ಪ್ರತಿಕ್ರಿಯೆ

    ಬೆಂಗಳೂರು: ರೋಹಿಣಿ ಸಿಂಧೂರಿ ವಿರುದ್ಧ ಡಿ ರೂಪಾ ಆರೋಪ ಹಿನ್ನೆಲೆಯಲ್ಲಿ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಕಡೆಗೂ ಮೌನ ಮುರಿದಿದ್ದು ರೂಪಾ ಆರೋಪಕ್ಕೆ ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

    ಐಪಿಎಸ್​ ಡಿ ರೂಪಾ ಬಗ್ಗೆ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಮಾತನಾಡಿರುವ ರೋಹಿಣಿ ಸಿಂಧೂರಿ ‘ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಾನಸಿಕ ಅಸ್ವಸ್ಥತೆಗೆ ಒಳಗಾದರೆ, ಅದು ಸಮಾಜಕ್ಕೆ ಬಹುದೊಡ್ಡ ಅಪಾಯಕಾರಿ ಬೆಳವಣಿಗೆ.

    ರೂಪಾ ಐಪಿಎಸ್ ಅವರು, ಜವಾಬ್ದಾರಿಯುತ ಸ್ಥಾನದಲ್ಲಿದ್ದು ನನ್ನ ಮೇಲೆ ವೈಯಕ್ತಿಕ ಹಗೆಯನ್ನ ಸಾಧಿಸಲು ಮಾನಸಿಕ ಸ್ಥಿಮಿತೆಯನ್ನು ಕಳೆದುಕೊಂಡಿರುವವರ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

    ಐಪಿಎಸ್ ರೂಪಾ ಅವರಿಗೆ, ಇದೊಂದು ಅಭ್ಯಾಸವಾಗಿ ಬಿಟ್ಟಿದೆ. ಅವರು ಇತ್ತೀಚಿನ ವರ್ಷಗಳಲ್ಲಿದ್ದ ಎಲ್ಲಾ ಹುದ್ದೆಗಳಲ್ಲಿ ಇದೇ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡುವ ಮೂಲಕ ಮಾಧ್ಯಮಗಳ ಗಮನ ಸೆಳೆದು ತಾವು ದ್ವೇಷಿಸುವ ವ್ಯಕ್ತಿಗಳ ಮೇಲೆ ವೈಯಕ್ತಿಕವಾಗಿ ಹಗೆತನ ಸಾಧಿಸಲು ಕೀಳು ಮಟ್ಟದ ಪ್ರವೃತ್ತಿನ್ನ ಪ್ರದರ್ಶಿಸುತ್ತಿದ್ದಾರೆ. ಅವರು ಯಾವಾಗಲೂ ಸುದ್ದಿಯಲ್ಲಿರಬೇಕು ಎನ್ನುವುದನ್ನು ಬಯಸುತ್ತಾರೆ ಹಾಗೂ ಅದಕ್ಕೆ ಬೇಕಾದಂತಹ ಪೋಸ್ಟ್‌ಗಳನ್ನು ತಮ್ಮ ಸಾಮಾಜಿಕ ಮಾಧ್ಯಮದ ಪುಟಗಳಲ್ಲಿ ಹಾಕುವ ಮೂಲಕ ಸುದ್ದಿಯ ಕೇಂದ್ರ ಬಿಂದುವಾಗಲು ಯತ್ನಿಸುತ್ತಿದ್ದಾರೆ.

    ಸಾಮಾಜಿಕ ಮಾಧ್ಯಮಗಳಿಂದ ಹಾಗೂ ವಾಟ್ಸ್ ಆಪ್ ಸ್ಟೇಟಸ್‌ಗಳಿಂದ ಕ್ಲೀನ್‌ ಶಾಟ್‌ಗಳ ಮೂಲಕ ಸಂಗ್ರಹಿಸಿರುವ ಫೋಟೋಗಳನ್ನ ನನ್ನ ತೇಜೋವಧೆ ಮಾಡಲು ರೂಪಾ ಐಪಿಎಸ್ ಅವರು ಬಳಸಿದ್ದಾರೆ, ಈ ಫೋಟೋಗಳನ್ನು ನಾನು ಕಲ ಅಧಿಕಾರಿಗಳಿಗೆ ಕಳುಹಿಸಿದ್ದೇನೆ ಎನ್ನುವ ಸುಳ್ಳು ಆರೋಪ ಮಾಡಿರುವ ಅವರು ಸದರಿ ಅಧಿಕಾರಿಗಳ ಹೆಸರನ್ನ ಬಹಿರಂಗಪಡಿಸಬೇಕು ಎಂದು ಆಗ್ರಹಿಸುತ್ತೇವೆ.

    ನನ್ನ ವಿರುದ್ಧ ರೂಪಾ ಐಪಿಎಸ್ ಅವರು ರೂಪಾ ರವರ ಮೇಲೆ ಸರ್ವೀಸ್ ಕಂಡಕ್ಟ್ ರೂಲ್ಸ್ (ಸೇವಾ ನಡತೆ ನಿಯಮಗಳ) ಉಲ್ಲಂಘನೆಗಾಗಿ ಶಿಸ್ತು ಕ್ರಮ ಕೈಗೊಳ್ಳುವಂತೆ ಕೋಲ ನಾನು ಸಕ್ಷಮ ಪ್ರಾಧಿಕಾರದ ಮುಂದೆ ದೂರು ಸಲ್ಲಸಲಿದ್ದೇವೆ. ಹಾಗೂ, ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ರೂಪಾ ಐಪಿಎಸ್ ಅವರ ಮೇಲೆ ಎಲಾ ರೀತಿಯ ಕಾನೂನಿನ ಕ್ರಮಗಳನ್ನ ಕೈಗೊಳ್ಳುತ್ತೇನೆ.

    ಇಂತಹ ಆಧಾರರಹಿತ ಆರೋಪಗಳಿಂದ ನಾನು ಸ್ವಲ್ಪವೂ ವಿಚಲತಳಾಗದೆ, ಸರ್ಕಾರಿ ಅಧಿಕಾರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧೆ ಮತ್ತು ನಿಷ್ಠೆಯಿಂದ ಮುಂದುವರೆಸುತ್ತೇನೆ ಎಂಬ ಅಂಶವನ್ನು ಇಂತಹ ಕ್ಷುಲ್ಲಕ ವ್ಯಕ್ತಿಗಳ ಗಮನಕ್ಕೆ ತರಬಯಸುತ್ತೇನೆ ಎಂದು ಆರೋಪಗಳನ್ನು ಅಲ್ಲಗಳೆದಿದ್ದಾರೆ.

    ಸರ್ಕಾರಿ ಅಧಿಕಾರಿಗಳ ಕಿತ್ತಾಟ: ಡಿ. ರೂಪಾಗೆ ರೋಹಿಣಿ ಸಿಂಧೂರಿ ಪ್ರತಿಕ್ರಿಯೆ

    ಈ ಮೂಲಕ, ತಮ್ಮ ಹಾಗೂ ಡಿ ರೂಪಾ ಐಪಿಎಸ್​ ನಡುವಿನ ಕಿತ್ತಾಟವನ್ನು ಕಾನೂನು ಕ್ರಮದ ಮೂಲಕ ಮುಂದುವರೆಸುವ ಬಗ್ಗೆ ರೋಹಿಣಿ ಸಿಂಧೂರಿ ಐಎಎಸ್​​ ಸುಳಿವು ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts