More

    ಕೋರ್ಟ್ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ; ಡಿ.ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ‌

    ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಆರೋಪ-ಪ್ರತ್ಯಾರೋಪಗಳು ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನವನ್ನೇ ಸೃಷ್ಟಿಸಿತ್ತು. ಇವರಿಬ್ಬರ ಜಟಾಪಟಿಯಿಂದ ಎಚ್ಚೆತ್ತ ಸರ್ಕಾರ ಇಬ್ಬರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ, ಇಲಾಖೆಯನ್ನು ಸೂಚಿಸದೆ ವರ್ಗಾವಣೆಗೊಳಿಸಿತ್ತು.

    ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ನ್ಯಾಯಾಲಯದ ಮೊರ ಹೋಗಿದ್ದರು. ಇದೀಗ ರೋಹಿಣಿ ಸಿಂಧೂರಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಡಿ.ರೂಪ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಖುದ್ದು ರೋಹಿಣಿ ಸಿಂಧೂರಿ ನ್ಯಾಯಾಧೀಶರ ಮುಂದೆ ಹಾಜರಾಗಿ ತಡೆಯಾಜ್ಞೆ ಇದ್ದರೂ ಸಾಮಾಜಿಕ ಜಾಲತಾಣದ ಮೂಲಕ ಡಿ.ರೂಪಾ ನನ್ನ ವಿರುದ್ಧ ನಿರಂತರ ಪೋಸ್ಟ್ ಮಾಡುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ. ಸದ್ಯ ಹೇಳಿಕೆಗಳನ್ನು ಗಮನಿಸಿದ ನ್ಯಾಯಾಧೀಶರು ಮಾರ್ಚ್ 3 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದ್ದಾರೆ.

    ಇದನ್ನೂ ಓದಿ: IPS ಡಿ.ರೂಪ vs IAS ರೋಹಿಣಿ ಕಿತ್ತಾಟ; ಡ್ಯಾಮೇಜ್ ಕಂಟ್ರೋಲ್​​ಗೆ ಸಿಎಂ ನೀಡಿದ ಖಡಕ್ ಸೂಚನೆಯೇನು?

    ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಜಗಳ ಬೀದಿಗೆ ಬಂದಿತ್ತು. ಖಾಸಗಿ ವಿಚಾರ, ಕರ್ತವ್ಯಲೋಪ, ಭ್ರಷ್ಟಾಚಾರ ಆರೋಪದಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೇಲೆ ಪೋಸ್ಟ್ ಹಾಕಿ ರೋಹಿಣಿ ಸಿಂಧೂರಿ ವಿರುದ್ಧ ಡಿ. ರೂಪಾ ಗಂಭೀರ ಆರೋಪ ಮಾಡಿದ್ದರು. ಡಿ.ರೂಪಾ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡುವ ಮೂಲಕ ರೋಹಿಣಿ ಸಿಂಧೂರಿ ತಿರುಗೇಟು ನೀಡಿದ್ದರು. ಐಎಎಸ್-ಐಪಿಎಸ್‌ನಂತಹ ಅತ್ಯುನ್ನತ ಹುದ್ದೆ ಅಲಂಕರಿಸಿರುವ ಇವರಿಬ್ಬರ ಬಹಿರಂಗ ಕಿತ್ತಾಟ ನೋಡಿದ ಸಾರ್ವಜನಿಕರು ತರಹೇವಾರಿಯಾಗಿ ಟೀಕೆ ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ: ರೋಹಿಣಿ ಸಿಂಧೂರಿ ಮತ್ತು ನನ್ನ ಮಗ ಸ್ನೇಹಿತರು; ಒಂದೆರಡು ಬಾರಿ ನಮ್ಮ ಮನೆಗೆ ಬಂದಿದ್ದರು ಎಂದ ಡಿ.ಕೆ.ರವಿ ತಾಯಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts