More

    ರೋಹಿಣಿ ಸಿಂಧೂರಿ ವರ್ಗಾವಣೆಗೆ ಕಾರಣವಾಯ್ತಾ ಸಿಎಂ ಬಿಎಸ್​ವೈ ತಿರುಪತಿ ಭೇಟಿ..?!

    ಮೈಸೂರು: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಒತ್ತಾಸೆಯಂತೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ರಾಜ್ಯ ಸರ್ಕಾರದ ವಿರುದ್ಧ ಕೇಳಿಬಂದಿದೆ.

    ಕೇವಲ ಒಂದು ತಿಂಗಳ ಹಿಂದಷ್ಟೇ ಕಲಬುರಗಿಯಿಂದ ವರ್ಗಾವಣೆಗೊಂಡು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್ ಅವರನ್ನು ಮತ್ತೆ ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.

    ಇದನ್ನೂ ಓದಿ: ಆರ್​ಸಿಬಿ ಗೆಲ್ಲುತ್ತಿದ್ದಂತೆ ವಿರಾಟ್​ ಕೊಹ್ಲಿ ಟೀಕಾಕಾರರ ಕಾಲೆಳೆದ ಪ್ರೀತಿ ಜಿಂಟಾ…!

    ವರ್ಗಾವಣೆಗೆ ಕಾರಣವಾಯ್ತಾ ಸಿಎಂ ತಿರುಪತಿ ಭೇಟಿ?
    ಇತ್ತೀಚಿಗಷ್ಟೇ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಪುತ್ರ ವಿಜಯೇಂದ್ರರೊಂದಿಗೆ ತಿರುಪತಿಗೆ ಭೇಟಿ ನೀಡಿದ್ದರು. ಈ ವೇಳೆ ಆಂಧ್ರ ಸಿಎಂ ಜಗನ್ ಸಹ ಆಗಮಿಸಿದ್ದರು. ಉಭಯ ರಾಜ್ಯಗಳ ಸಿಎಂ ತಿರುಪತಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ರೋಹಿಣಿ ಸಿಂಧೂರಿ ಅವರು ಮೂಲತಃ ಆಂಧ್ರದವರೇ ಆಗಿರುವುದರಿಂದ ಈ ವೇಳೆ ವರ್ಗಾವಣೆ ಚರ್ಚೆ ನಡೆದಿದೆ ಎನ್ನಲಾಗಿದೆ. ಅದಕ್ಕೆ ಪುಷ್ಠಿ ನೀಡುವಂತೆಯೇ ಭೇಟಿಯಾದ ಕೆಲವೇ ದಿನಗಳಲ್ಲಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದೆ. ​

    ಇನ್ನು ಬಿ. ಶರತ್​ ಅವರು ಕೇವಲ ಒಂದು ತಿಂಗಳ ಹಿಂದೆಯಷ್ಟೇ ಅಧಿಕಾರ ಸ್ವೀಕರಿಸಿದ್ದರು. ಕೋವಿಡ್ ಹಾಗೂ ದಸರಾ ಸಂದರ್ಭ ಕೆಲಸ ಮಾಡುತ್ತಿದ್ದರು. ಕರೊನಾ ಸಾವಿನ ಪ್ರಮಾಣ ತಗ್ಗಿಸುವಲ್ಲಿ ವಿಫಲತೆ ಆರೋಪ. ಟೆಸ್ಟಿಂಗ್ ಪ್ರಮಾಣ ಹೆಚ್ಚಿಸುವಲ್ಲಿಯೂ ಹಿನ್ನೆಡೆಯನ್ನು ನೆಪವಾಗಿಸಿಕೊಂಡು ಶರತ್​ ತಲೆದಂಡ ಮಾಡಲಾಗಿದೆ. (ದಿಗ್ವಿಜಯ ನ್ಯೂಸ್​)

    ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ನಾಳೆ ಐತಿಹಾಸಿಕ ತೀರ್ಪು- ಎಲ್ಲೆಡೆ ಕಟ್ಟೆಚ್ಚರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts