

ಮುಂಬೈ: ಟೀಮ್ ಇಂಡಿಯಾ ಟೆಸ್ಟ್ ಹಾಗೂ ಏಕದಿನ ತಂಡದ ನಾಯಕ ರೋಹಿತ್ ಶರ್ಮ (Rohit Sharma) ಮನೆಗೆ ಹೊಸ ಅತಥಿಯ ಆಗಮನವಾಗಿದ್ದು, ಪತ್ನಿ ರಿತಿಕಾ ಸಜ್ದೇ (Ritika Sajdeh) ಶುಕ್ರವಾರ (ನವೆಂಬರ್ 15) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಬಗ್ಗೆ ರೋಹಿತ್ (Rohit Sharma) ಮತ್ತು ರಿತಿಕಾ (Ritika Sajdeh) ಬಗ್ಗೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಅಬಿಮಾನಿಗಳು ಕಮೆಂಟ್ ಹಾಕುತ್ತಿದ್ದಾರೆ. ರೋಹಿತ್ ಮತ್ತು ರಿತಿಕಾ 2015ರಲ್ಲಿ ಮದುವೆಯಾದರು. 2018, ಡಿಸೆಂಬರ್ನಲ್ಲಿ ಸಮೀರ ಎಂಬ ಹೆಣ್ಣು ಮಗು ಜನಿಸಿದೆ.
ಇದೀಗ ಜೂನಿಯರ್ ಹಿಟ್ಮ್ಯಾನ್ ಆಗಮನದೊಂದಿಗೆ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಕೂಡ ಸಿಕ್ಕಿದಂತಾಗಿದೆ. ಏಕೆಂದರೆ 2ನೇ ಮಗುವಿನ ನಿರೀಕ್ಷೆಯಲ್ಲಿದ್ದ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಇದೀಗ ಜೂನಿಯರ್ ಹಿಟ್ಮ್ಯಾನ್ ಆಗಮನದಿಂದ ಹಿಟ್ಮ್ಯಾನ್ ಆಸ್ಟ್ರೇಲಿಯಾಗೆ ಪ್ರಯಾಣಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ.
ಸದ್ಯ ಮುಂಬೈನಲ್ಲಿರುವ ರೋಹಿತ್ ಶರ್ಮಾ ಪರ್ತ್ಗೆ ಟೆಸ್ಟ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ನವೆಂಬರ್ 22 ರಿಂದ ಶುರುವಾಗಲಿರುವ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಅವರು ಮೊದಲ ಪಂದ್ಯಕ್ಕೆ ಅಲಭ್ಯರಾದರೆ ಭಾರತ ತಂಡವನ್ನು ಜಸ್ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ.
https://www.vijayavani.net/sanju-samsons-massive-six-hits-female-fan-on-face-india-star-does-this
https://www.vijayavani.net/clash-between-actor-darshan-fans-and-pratham-goes-viral-on-social-media