More

    ರೋಹಿತ್​ಗೆ ಮತ್ತೆ ಮುಂಬೈ ಇಂಡಿಯನ್ಸ್​ ನಾಯಕನ ಪಟ್ಟ; ಕಾರಣ ಹೀಗಿದೆ

    ಮುಂಬೈ: ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್​ ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿದ ಬಿಸಿಸಿಐ ಇದೀಗ 2024ರಲ್ಲಿ ನಡೆಯುವ ಇಂಡಿಯನ್​ ಪ್ರೀಮಿಯರ್​ ಲೀಗ್​ಗೆ ತಯಾರಿ ಆರಂಭಿಸಿದೆ. ಇತ್ತ ಮುಂಬೈ ಇಂಡಿಯನ್ಸ್​ ರೋಹಿತ್​ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​ ಪಾಂಡ್ಯ ಅವರನ್ನು ಕ್ಯಾಪ್ಟನ್​ ಆಗಿ ನೇಮಿಸುವ ಮೂಲಕ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

    ರೋಹಿತ್​ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿದ ಬಳಿಕ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದ ಮುಂಬೈ ಇಂಡಿಯನ್ಸ್​ ಸಾಮಾಜಿಕ ಜಾಲತಾಣದಲ್ಲಿ ಫಾಲೋವರ್ಸ್​ಅನ್ನು ಕಳೆದುಕೊಂಡಿತ್ತು. ಆದರೆ, ಇದೀಗ ರೋಹಿತ್​ ಶರ್ಮಾ ಅಭಿಮಾನಿಗಳಿಗಾಗಿ ಶುಭ ಸುದ್ದಿಯೊಂದು ಹೊರಬಿದ್ದಿದ್ದು, ಖಂಡಿತವಾಗಿಯೂ ಇದು ನೆರವೇರಬೇಕು ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸಿದ್ದಾರೆ.

    ಇದನ್ನೂ ಓದಿ: ಹಿಜಾಬ್ ನಿಷೇಧ ವಾಪಸ್; ರಾಜ್ಯದಲ್ಲಿರುವುದು ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ‌: ಎಂ.ಪಿ. ರೇಣುಕಾಚಾರ್ಯ

    ಏಕದಿನ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್​ ಮಾಡುವ ವೇಳೆ ಗಾಯಕ್ಕೆ ತುತ್ತಾಗಿದ್ದ ಆಲ್​ರೌಂಡರ್​ ಹಾರ್ದಿಕ್​ ಪಾಂಡ್ಯ ಪುನಶ್ಚೇತನಕ್ಕಾಗಿ ಈಗಾಗಲೇ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ (NCA) ಸೇರಿಕೊಂಡಿದ್ದು, ಅವರು ಸಂಪೂರ್ಣವಾಗಿ ಫಿಟ್​ ಆಗಲು ಇನ್ನು ಕೆಲ ಸಮಯ ಬೇಕಾಗಬಹುದು ಎಂದು ಹೇಳಲಾಗಿದೆ.

    ಜನವರಿ 11ರಿಂದ ಅಫ್ಘಾನಿಸ್ತಾನ ವಿರುದ್ಧ ಆರಂಭವಾಗಲಿರುವ ಟಿ-20 ಸರಣಿಗೂ ಪಾಂಡ್ಯ ಅಲಭ್ಯರಾಗಿದ್ದು, ಐಪಿಎಲ್​ ವೇಳೆಗೆ ಸಂಪೂರ್ಣ ಫಿಟ್​ ಆಗುವುದು ಡೌಟ್ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿ ಅವರು 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ. ಒಂದು ವೇಳೆ ಹಾಗೆ ಆದಲ್ಲಿ ಟೀಂ ಇಂಡಿಯಾ ಮತ್ತು ಮುಂಬೈ ಇಂಡಿಯನ್ಸ್​ ತಂಡಕ್ಕೆ ಇದು ದೊಡ್ಡ ಹೊಡೆತ ಎಂದೇ ಹೇಳಬಹುದಾಗಿದೆ. ಇತ್ತ ಈ ಸುದ್ದಿ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮೀಮ್ಸ್​ಗಳ ಮೂಲಕ ಪ್ರತಿಕ್ರಿಯಿಸಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts