17 C
Bangalore
Monday, December 9, 2019

ಹೆಣ್ಣುಮಗುವಿನ ತಂದೆಯಾದ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ

Latest News

ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಗೆ ಅಂತ್ಯ ಹಾಡುತ್ತಾ?

ಬೆಂಗಳೂರು: ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿದ್ದ ರಾಜಕೀಯ ಅಸ್ಥಿರತೆಯ ಗ್ರಹಣ ಸೋಮವಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆಗಳಂತೆಯೇ ಜನಾಭಿಪ್ರಾಯ ರೂಪುಗೊಂಡಿದ್ದರೆ, ಬಿಜೆಪಿ...

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ನವದೆಹಲಿ: ಕ್ರಿಕೆಟಿಗ ರೋಹಿತ್‌ ಶರ್ಮಾ ಪತ್ನಿ ರಿತಿಕಾ ಸಜ್ದೆ ಅವರು ಮೊದಲ ಹೆಣ್ಣು ಮಗುವಿಗೆ ಡಿ. 30ರಂದು ಜನ್ಮ ನೀಡಿದ್ದು, ಕ್ರಿಕೆಟ್​ ಲೋಕ ಹಾಗೂ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

ನಿನ್ನೆಯಷ್ಟೇ ಮೆಲ್ಬೋರ್ನ್‌ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ಅವರು ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ. ಈ ಕುರಿತು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಣೆ ನೀಡಿದ್ದು, ದಂಪತಿಗೆ ಶುಭ ಕೋರಿದೆ.

ಸದ್ಯ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುತ್ತಿದ್ದ ರೋಹಿತ್ ಶರ್ಮಾ ಪತ್ನಿ ಮತ್ತು ಮಗುವನ್ನು ನೋಡಲು ಆಸ್ಟ್ರೇಲಿಯಾದಿಂದ ಮುಂಬೈಗೆ ಆಗಮಿಸುತ್ತಿದ್ದು, ಇದೇ ಜನವರಿ 3ರಿಂದ ಸಿಡ್ನಿಯಲ್ಲಿ ಆರಂಭವಾಗಲಿರುವ ನಾಲ್ಕನೇ ಹಾಗೂ ಕೊನೆ ಟೆಸ್ಟ್‌ ಪಂದ್ಯದಲ್ಲಿ ಗೈರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಜ. 12ರಿಂದ ಶುರುವಾಗಲಿರುವ ಸೀಮಿತ ಓವರ್‌ಗಳ ಸರಣಿಯಲ್ಲಿ ಪಾಲ್ಗೊಳ್ಳಲಿದ್ದು, ಅದಕ್ಕೂ ಮುನ್ನ ಜ. 8 ರಂದು ಏಕದಿನ ತಂಡವನ್ನು ಸೇರಿಕೊಳ್ಳಲಿದ್ದಾರೆ.

ರೋಹಿತ್‌ ಗೈರಿನ ಹಿನ್ನೆಲೆಯಲ್ಲಿ ಬದಲಿ ಆಟಗಾರರನನ್ನು ಹೆಸರಿಸಿಲ್ಲ. ಆದರೆ, ಪ್ರವಾಸಿ ಭಾರತವು ತಮ್ಮ ತಂಡದಲ್ಲಿ ಹೆಚ್ಚುವರಿ ಆಟಗಾರರೊಂದಿಗೆ ತೆರಳಿದೆ.

ರಿತಿಕಾರ ಸೋದರ ಸಂಬಂಧಿ ಮತ್ತು ಸೊಹೈಲ್‌ ಖಾನ್‌ ಹೆಂಡತಿ ಸೀಮಾ ಖಾನ್‌ ಇದಕ್ಕೂ ಮುನ್ನ ಇನ್ಸ್ಟಾ ಗ್ರಾಂನಲ್ಲಿ ತಮ್ಮ ಮತ್ತು ರಿತಿಕಾರಿರುವ ಫೋಟೊ ಶೇರ್‌ ಮಾಡಿ ಬೇಬಿ ಗರ್ಲ್‌ ಮತ್ತು ಮತ್ತೆ ಮಾಸಿಸ್‌ ರೋ ಹಿಟ್‌ ಮ್ಯಾನ್‌ ಅಭಿಮಾನಿಗಳ ಸಂಭ್ರಮ ಎಂದು ಬರೆದುಕೊಂಡಿದ್ದಾರೆ. (ಏಜೆನ್ಸೀಸ್)

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...