More

    ಐಪಿಎಲ್​ನಲ್ಲಿ ಅಪರೂಪದ ದಾಖಲೆ ಬರೆದ ರೋಹಿತ್​ ಶರ್ಮಾ; ಏನದು?

    ಮುಲ್ಲನ್​ಪುರ: ಇಲ್ಲಿನ ಮಹಾರಾಜ ಯಾದವೀಂದ್ರ ಸಿಂಗ್​ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಹಾಗೂ ಪಂಜಾಬ್​ ಕಿಂಗ್ಸ್​ ಮುಖಾಮುಖಿಯಾಗಿದ್ದು, ಟಾಸ್​ ಗೆದ್ದಿರುವ ಪಂಜಾಬ್​ ಮುಂಬೈ ಅನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದೆ. ಇನ್ನೂ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್​​ ಶರ್ಮಾ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ.

    ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್​ ಶರ್ಮಾಗೆ ಇದು 250ನೇ ಐಪಿಎಲ್​ ಪಂದ್ಯವಾಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್​ ಶರ್ಮಾ ಐಪಿಎಲ್​ನಲ್ಲಿ 250 ಪಂದ್ಯಗಳನ್ನು ಆಡಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ರೋಹಿತ್​ ಶರ್ಮಾಗೂ ಮೊದಲು ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಈ ಸಾಧನೆ ಮಾಡಿದ್ದು, ಐಪಿಎಲ್‌ನಲ್ಲಿ 250ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದುವರೆಗೆ ಧೋನಿ ಐಪಿಎಲ್​ನಲ್ಲಿ 256 ಪಂದ್ಯಗಳನ್ನು ಆಡಿದ್ದಾರೆ. ಪಂಜಾಬ್​ ವಿರುದ್ಧ 250ನೇ ಪಂದ್ಯ ಆಡುತ್ತಿರುವ ರೋಹಿತ್​ ಶರ್ಮಾ ಈವರೆಗೆ 6508 ರನ್​ ಸಿಡಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

    Sharma Dhoni

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts