More

    ಸಾಕು ನಿಲ್ಲಿಸ್ರಯ್ಯ ನಿಮ್ಮ ಕೈಮುಗಿತೀನಿ! ಕೊನೆಗೂ ಮಧ್ಯಪ್ರವೇಶ ಮಾಡಿದ ರೋಹಿತ್​ ಶರ್ಮ

    ಮುಂಬೈ: ಕೊನೆಗೂ ಮಧ್ಯಪ್ರವೇಶ ಮಾಡಿದ ಮುಂಬೈ ಇಂಡಿಯನ್ಸ್​ ತಂಡದ ಮಾಜಿ ನಾಯಕ ರೋಹಿತ್​ ಶರ್ಮ, ಹಾಲಿ ನಾಯಕ ಹಾರ್ದಿಕ್​ ಪಾಂಡ್ಯರನ್ನು ನೋಡಿ ಗೇಲಿ ಮಾಡದಂತೆ ವಾಂಖೆಡೆ ಕ್ರೀಡಾಂಗಣದಲ್ಲಿ ನೆರೆದಿದ್ದ ಕ್ರೀಡಾಭಿಮಾನಿಗಳ ಬಳಿ ಮನವಿ ಮಾಡಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಐಪಿಎಲ್​ ನಾಯಕತ್ವ ಬದಲಾವಣೆ ಆದಾಗಿನಿಂದ ಮುಂಬೈ ತಂಡದಲ್ಲಿ ಎಲ್ಲವೂ ಸರಿಯಿಲ್ಲ. ರೋಹಿತ್​ರಿಂದ ನಾಯಕತ್ವ ಕಸಿದು ಹಾರ್ದಿಕ್​ ಪಾಂಡ್ಯಗೆ ನೀಡಿರುವುದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಹಾರ್ದಿಕ್​ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟೀಕಾ ಪ್ರಹಾರಗಳು ನಡೆಯುತ್ತಿವೆ. ಗುಜರಾತ್​ ಟೈಟಾನ್​ ವಿರುದ್ಧದ ಪಂದ್ಯದಲ್ಲಿ ಮೈದಾನಕ್ಕೆ ನಾಯಿ ನುಗ್ಗಿದಾಗ ಕ್ರೀಡಾಂಗಣದಲ್ಲಿ ನೆರೆದಿದ್ದ ಬಹುತೇಕರು ಹಾರ್ದಿಕ್​ ಹೆಸರನ್ನು ಕೂಗುವ ಮೂಲಕ ಅವಮಾನ ಮಾಡಿದ್ದರು. ಅಲ್ಲದೆ, ಎಲ್​ಇಡಿ ಪರದೆ ಮೇಲೆ ಹಾರ್ದಿಕ್​ ಬಂದಾಗಲೆಲ್ಲ ಬೂ ಎಂದು ಕೂಗುವ ಮೂಲಕ ಅಪಹಾಸ್ಯ ಮಾಡುತ್ತಿದ್ದರು. ಸನ್​​ ರೈಸರ್ಸ್​ ಹೈದರಾಬಾದ್​ ಪಂದ್ಯದಲ್ಲೂ ಇದು ಮರುಕಳಿಸಿತ್ತು. ಇದನೆಲ್ಲ ರೋಹಿತ್​ ಅಭಿಮಾನಿಗಳು ಮಾಡುತ್ತಿದ್ದಾರೆ ಎಂಬ ಆರೋಪವೂ ಇದೆ.

    ಇದೀಗ ಮಧ್ಯ ಪ್ರವೇಶ ಮಾಡಿರುವ ರೋಹಿತ್​, ಬೌಂಡರಿ ಲೈನ್​ ಬಳಿ ನಿಂತು ಬೂ ಎಂದು ಕೂಗದಂತೆ ಅಭಿಮಾನಿಗಳನ್ನು ಒತ್ತಾಯಿಸಿದ್ದಾರೆ. ನಿನ್ನೆ (ಏಪ್ರಿಲ್​ 1) ವಾಂಖೆಡೆ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್​ ವಿರುದ್ಧ ನಡೆದ ಪಂದ್ಯದ ವೇಳೆ ಬೌಂಡರಿ ಗೆರೆಯ ಬಳಿ ನಿಂತಿದ್ದ ವೇಳೆ ಕೈ ಮೂಲಕ ಸನ್ನೆ ಮಾಡುವ ಮೂಲಕ ಸಾಕು ನಿಲ್ಲಿಸಿ ಎಂದು ಕೈಮುಗಿದು ಅಭಿಮಾನಿಗಳ ಬಳಿ ರೋಹಿತ್​ ಮನವಿ ಮಾಡಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ರೋಹಿತ್​ ನಡೆಯನ್ನು ಮೆಚ್ಚಿಕೊಂಡಿದ್ದಾರೆ.

    ಇದೇ ಸಂದರ್ಭದಲ್ಲಿ ಟೀಮ್​ ಇಂಡಿಯಾದ ಮಾಜಿ ಆಟಗಾರ ಸಂಜಯ್​ ಮಂಜ್ರೇಕರ್​ ಸಹ ಸುಮ್ಮನೇ ಇರುವಂತೆ ಮುಂಬೈ ಅಭಿಮಾನಿಗಳನ್ನು ಒತ್ತಾಯಿಸಿದರು.

    ಇನ್ನೂ ಪಂದ್ಯದ ವಿಚಾರಕ್ಕೆ ಬಂದರೆ, ನಿನ್ನೆ (ಏಪ್ರಿಲ್ 1) ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ 14ನೇ ಐಪಿಎಲ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಎದುರು ಆಲ್ರೌಂಡ್​ ಪ್ರದರ್ಶನದ ಫಲವಾಗಿ ರಾಜಸ್ಥಾನ ರಾಯಲ್ಸ್​ ತಂಡವು ಟೂರ್ನಿಯಲ್ಲಿ ಮೂರನೇ ಗೆಲುವು ಸಾಧಿಸಿತು. ಟಾಸ್​ ಗೆದ್ದ ರಾಜಸ್ಥಾನ ತಂಡವು ಎದುರಾಳಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತ್ತು. ಅದರಂತೆ ನಾಯಕ ಹಾರ್ದಿಕ್​ ಪಾಂಡ್ಯ (34 ರನ್, 21 ಎಸೆತ, 6 ಬೌಂಡರಿ), ತಿಲಕ್​ ವರ್ಮಾ (32 ರನ್​, 29 ಎಸೆತ, 2 ಸಿಕ್ಸರ್​) ಪ್ರತಿರೋಧದ ನಡುವೆಯೂ 20 ಓವರ್​ಗಳಲ್ಲಿ 125ರನ್​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.

    126ರನ್​ ಗಳ ಸುಲಭ ಗುರಿ ಬೆನ್ನತ್ತಿದ್ದ ರಾಯಲ್ಸ್​ ತಂಡದ ಪರವಾಗಿ ರಿಯಾನ್​ ಪರಾಗ್​ (54 ರನ್, 39 ಎಸೆತ, 5 ಬೌಂಡರಿ, 3 ಸಿಕ್ಸರ್​) ಅರ್ಧಶತಕದ ಫಲವಾಗಿ15.3 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 127 ರನ್​ ಗಳಿಸಿ ಗೆಲುವಿನ ನಗೆ ಬೀರಿತ್ತು. (ಏಜೆನ್ಸೀಸ್​)

    ಸಾಧಿಸಲು ಇನ್ನೇನು ಉಳಿದಿದೆ? ವಿರಾಟ್​ ಕೊಹ್ಲಿಗೆ ಅವಮಾನ ಮಾಡಿತಾ ಸ್ಮೃತಿ ಮಂದನಾ ಪಡೆ!?

    ನಾನು ಆರ್​ಸಿಬಿಯ ನಿಷ್ಠಾವಂತ ಅಭಿಮಾನಿ ಆದರೆ… ಇಕ್ಕಟ್ಟಿಗೆ ಸಿಲುಕಿದ ರಶ್ಮಿಕಾ ಮಂದಣ್ಣ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts