More

    ಐದು ಟ್ರೋಪಿಗಳನ್ನು ಗೆದ್ದು ಕೊಟ್ಟಿರುವ ನನಗೆ ಅಗೌರವವಾಗಿದೆ; ಅಸಮಾಧಾನ ಹೊರಹಾಕಿದ ಹಿಟ್​ಮ್ಯಾನ್

    ಮುಂಬೈ: ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್​ ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿದ ಬಿಸಿಸಿಐ ಇದೀಗ 2024ರಲ್ಲಿ ನಡೆಯುವ ಇಂಡಿಯನ್​ ಪ್ರೀಮಿಯರ್​ ಲೀಗ್​ಗೆ ತಯಾರಿ ಆರಂಭಿಸಿದೆ. ಇತ್ತ ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ ರೋಹಿತ್​ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​ ಪಾಂಡ್ಯ ಅವರನ್ನು ಕ್ಯಾಪ್ಟನ್​ ಆಗಿ ನೇಮಿಸಿದ್ದು, ವ್ಯಾಪಕ ಆಕ್ರೋಶ ಹಾಗೂ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ.

    ಇತ್ತ ರೋಹಿತ್​ ಶರ್ಮಾರನ್ನು ಫ್ರಾಂಚೈಸಿ ನಾಯಕತ್ವದಿಂದ ಕೆಳಗಿಳಿಸಿದ ಬೆನ್ನಲ್ಲೇ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡುಲ್ಕರ್ ಅವರು ಮೆಂಟರ್​ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರೋಹಿತ್​ರನ್ನು ನಾಯಕತ್ವದಿಂದ ಕೆಳಗಿಳಿಸಿದ ತಂಡದ ಮ್ಯಾನೇಜ್​ಮೆಂಟ್​ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

    Rohit Sharma

    ಇದನ್ನೂ ಓದಿ: ಆಟವಾಡುತ್ತಿದ್ದ ಮಗುವಿನ ಮೇಲೆ ಹರಿಯಿತು ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

    ಇತ್ತ ನಾಯಕತ್ವದಿಂದ ಕೆಳಗಿಳಿಸಿದ ಕುರಿತು ತಮ್ಮ ಆಪ್ತರ ಬಳಿ ಅಸಮಾಧಾನ ಹೊರಹಾಕಿರುವ ರೋಹಿತ್​ ಶರ್ಮಾ, ನನಗೆ ಒಂದು ಫೋನ್​ ಕಾಲ್​ ಕೂಡ ಮಾಡದೆ ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ನಾನು ಈ ವಿಚಾರವನ್ನು ತಿಳಿದುಕೊಂಡೆ. ತಂಡಕ್ಕೆ ಐದು ಐಪಿಎಲ್​ ಟ್ರೋಫಿಗಳನ್ನು ಗೆದ್ದು ಕೊಟ್ಟಿರುವ ನನಗೆ ಅಗೌರವವಾಗಿದೆ ಎಂದು ರೋಹಿತ್​ ಶರ್ಮಾ ತಮ್ಮ ಆಪ್ತರ ಬಳಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

    ಈಗಾಗಲೇ ಹಾರ್ದಿಕ್​ ಪಾಂಡ್ಯರನ್ನು ಮುಂಬರುವ ಆವೃತ್ತಿಗೆ ತಂಡದ ನಾಯಕನನ್ನಾಗಿ ಮಾಡುವ ಮೂಲಕ ಮುಂಬೈ ಇಂಡಿಯನ್ಸ್​ ಸಾಕಷ್ಟು ಖಂಡನೆಗೆ ಗುರಿಯಾಗಿದ್ದು, ಇದರ ಪರಿಣಾಮ ಸಾಮಾಜಿಕ ಜಾಲತಾಣದ ಮೇಲೆ ಬೀರಿದೆ. ತಂಡದ ನಾಯಕತ್ವ ವಹಿಸಿಕೊಂಡಿರುವ ಹಾರ್ದಿಕ್​ ಪಾಂಡ್ಯ ರೋಹಿತ್​ ಶರ್ಮಾರಂತೆ ಯಶಸ್ವಿ ನಾಯಕನಾಗಲಿದ್ದಾರಾ ಎಂದು ಕಾದುನೋಡಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts