More

    ಐಪಿಎಲ್​ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಹಿಟ್​ಮ್ಯಾನ್​​

    ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್​ ಹಾಗೂ ರಾಜಸ್ಥಾನ ರಾಯಲ್ಸ್​ ನಡುವಿನ ಐಪಿಎಲ್​ ಪಂದ್ಯದಲ್ಲಿ ಎದುರಾಳಿ ತಂಡದ ಬ್ಯಾಟ್ಸ್​ಮನ್​ಗಳನ್ನು ಅಲ್ಪಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಆರ್​ಆರ್​ ಬೌಲರ್​ಗಳು ಯಶಸ್ವಿಯಾಗಿದ್ಧಾರೆ. ಸತತ ಸೋಲುಗಳಿಂದ ಕಂಗೆಟ್ಟಿರುವ ಹಾರ್ದಿಕ್​ ಪಾಂಡ್ಯ ಪಡೆಗೆ ಈ ಪಂದ್ಯದಲ್ಲೂ ಹಿನ್ನಡೆ ಅನುಭವಿಸುವ ಭೀತಿ ಎದುರಿಸುತ್ತಿದ್ದು, ಇದರ ನಡುವೆಯೆ ಮಾಜಿ ನಾಯಕ ರೋಹಿತ್​ ಶರ್ಮಾ ಅನಪೇಕ್ಷಿತ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಟಾಸ್​​ ಗೆದ್ದು ಮೊದಲು ಬೌಲಿಂಗ್​ ಮಾಡಿದ ರಾಜಸ್ಥಾನ ರಾಯಲ್ಸ್​ ತಂಡದ ಬೌಲರ್​ಗಳು ಮೊದಲ ಓವರ್​ನಿಂದಲೇ ಎದುರಾಳಿ ತಂಡದ ಬ್ಯಾಟ್ಸ್​ಮನ್​ಗಳ ಮೇಲೆ ಕಡಿವಾಣ ಹೇರುವಲ್ಲಿ ಯಶಸ್ವಿಯಾದರೂ. ಮುಂಬೈ ತಂಡಕ್ಕೆ ವೇಗಿ ಟ್ರೆಂಟ್ ಬೌಲ್ಟ್ ಆರಂಭದಲ್ಲೇ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು. ಮೊದಲ ಓವರ್​ನಲ್ಲೇ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ನಮನ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು.

     ಈ ಪಂದ್ಯದಲ್ಲಿ ರೋಹಿತ್ ಶರ್ಮಾ ತಾವು ಎದುರಿಸಿದ ಮೊದಲ ಎಸೆತದಲ್ಲೇ ಔಟಾದರು. ಈ ಮೂಲಕ ರೋಹಿತ್ ಐಪಿಎಲ್‌ನಲ್ಲಿ ಅತಿ ಹೆಚ್ಚು ಗೋಲ್ಡನ್ ಡಕ್‌ಗಳಿಗೆ ಔಟಾದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಡೆವಾಲ್ಡ್ ಬ್ರೆವಿಸ್ ಕೂಡ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಮುಂಬೈನ ಟಾಪ್ ಮೂವರು ಬ್ಯಾಟರ್​ಗಳು ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು.

    ಇದನ್ನೂ ಓದಿ: IPL 2024; ಪ್ಲೇಆಫ್​ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ ಜಂಬೋ

    ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಸೊನ್ನೆಗೆ ಔಟಾಗುವ ಮೂಲಕ ಐಪಿಎಲ್​ನಲ್ಲಿ ಬೇಡದ ದಾಖಲೆಯೊಂದನ್ನು ಬರೆದಿದ್ದಾರೆ. ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಇದುವರೆಗೆ 17 ಬಾರಿ ಗೋಲ್ಡನ್ ಡಕ್‌ನಲ್ಲಿ ಔಟಾಗಿದ್ದಾರೆ. ರೋಹಿತ್‌ಗಿಂತ ಮೊದಲು ಆರ್‌ಸಿಬಿಯ ದಿನೇಶ್ ಕಾರ್ತಿಕ್ ಕೂಡ ಐಪಿಎಲ್‌ನಲ್ಲಿ 17 ಬಾರಿ ಶೂನ್ಯಕ್ಕೆ ಔಟಾಗಿದ್ದು, ಜಂಟಿಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

    ಈಗಾಗಲೇ ಹಾರ್ದಿಕ್​ ಪಾಂಡ್ಯ ನಾಯಕತ್ವದಲ್ಲಿ ಸತತ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್​ಗ ರಾಜಸ್ಥಾನ ವಿರುದ್ಧದ ಪಂದ್ಯದಲ್ಲೂ ಕಂಬ್ಯಾಕ್​ ಮಾಡುತ್ತದ ಅಥವಾ ಹ್ಯಾಟ್ರಿಕ್​ ಸೋಲಿಗೆ ಶರಣಾಗುತ್ತದ ಎಂದು ಕಾದು ನೋಡಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts