More

    ವಿಶ್ವಕಪ್ ಫೈನಲ್‌ನ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರೋಹಿತ್ ಶರ್ಮಾ; ಪತ್ನಿ ರಿತಿಕಾ ಜೊತೆ ಎಲ್ಲಿಗೆ ಹೋಗಿದ್ದಾರೆ?

    ನವದೆಹಲಿ: ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ 2023 ರ ಫೈನಲ್‌ನಲ್ಲಿ ಸೋತಿತು. ಇದಾದ ನಂತರ ರೋಹಿತ್ ಶರ್ಮಾ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದಿದ್ದರು. ಫೈನಲ್ ಪಂದ್ಯದ ಮರುದಿನ ಮುಂಬೈನ ವಿಮಾನ ನಿಲ್ದಾಣದಲ್ಲಿ ರೋಹಿತ್ ಕೊನೆಯ ಬಾರಿಗೆ ಕಾಣಿಸಿಕೊಂಡರು. ಫೈನಲ್‌ನಲ್ಲಿ ಸೋಲಿನ ನಂತರ, ರೋಹಿತ್ ಶರ್ಮಾ ಅವರ ಮುಖದಲ್ಲಿ ದುಃಖ ಸ್ಪಷ್ಟವಾಗಿ ಕಾಣುತ್ತಿತ್ತು. ಇದೇ ಕಾರಣಕ್ಕೆ ಅವರು ಸಾರ್ವಜನಿಕರ ಕಣ್ಣಿನಿಂದ ದೂರವಾಗಿದ್ದರು.

    ವಿಶ್ವಕಪ್ ಫೈನಲ್‌ನ ಒಂದು ವಾರದ ನಂತರ, ಇದೀಗ ರೋಹಿತ್ ಶರ್ಮಾ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದು, ಪತ್ನಿ ರಿತಿಕಾ ಸಜ್ದೇಹ್ ಜೊತೆಗಿರುವ ಫೋಟೋವನ್ನು ಇನ್ಸ್ಟಾಗ್ರಾಮ್​​​ನಲ್ಲಿ ಹಂಚಿಕೊಂಡಿದ್ದಾರೆ. ರೋಹಿತ್ ರಿತಿಕಾ ಭುಜದ ಮೇಲೆ ಕೈಯಿಟ್ಟು ನಡೆಯುತ್ತಿದ್ದಾರೆ. ಆದರೆ, ಸ್ಥಳದ ಬಗ್ಗೆ ಮಾಹಿತಿ ನೀಡಿಲ್ಲ. ಫೋಟೋ ನೋಡಿದರೆ ಅದು ಯುರೋಪ್​​​ ಇರಬಹುದು ಎಂದು ತೋರುತ್ತದೆ.

    2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ತಮ್ಮ ಬ್ಯಾಟಿಂಗ್​​​ನಿಂದ ಸಂಚಲನ ಮೂಡಿಸಿದ್ದರು. ಅವರು ಪಂದ್ಯಾವಳಿಯ ಎರಡನೇ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿದ್ದರು. ಅವರ ನಾಯಕತ್ವದಲ್ಲಿ, ಭಾರತ ತಂಡವು ಸತತ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ತಲುಪಿತು. ಆದರೆ ಆಸ್ಟ್ರೇಲಿಯಾ ವಿರುದ್ಧ ಸೋತಿತು. ಅವರು ವಿಶ್ವಕಪ್‌ನ 11 ಇನ್ನಿಂಗ್ಸ್‌ಗಳಲ್ಲಿ 54.27 ಸರಾಸರಿಯಲ್ಲಿ 597 ರನ್ ಗಳಿಸಿದರು. ಈ ಅವಧಿಯಲ್ಲಿ ರೋಹಿತ್ ಸ್ಟ್ರೈಕ್ ರೇಟ್ 125ಕ್ಕಿಂತ ಹೆಚ್ಚಿತ್ತು.

    ಸದ್ಯ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡುತ್ತಿದೆ. ಸುಮಾರು ಒಂದು ವರ್ಷದಿಂದ ರೋಹಿತ್ ಶರ್ಮಾಗೆ ಈ ಮಾದರಿಯಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ. ಟಿ20 ಹೊರತುಪಡಿಸಿ, ಭಾರತ ತಂಡ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಮತ್ತು ಟೆಸ್ಟ್ ಸರಣಿಗಳನ್ನು ಆಡಲಿದೆ. ಆ ಸರಣಿಯಲ್ಲಿ ರೋಹಿತ್ ಶರ್ಮಾ ಮರಳಬಹುದು. ಇಲ್ಲಿಯವರೆಗೆ ಭಾರತ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. 

    ಯಾವುದೇ ಅಡೆತಡೆಯಿಲ್ಲದಿದ್ದರೆ 100 ಗಂಟೆಗಳಲ್ಲಿ ಸುರಂಗದಿಂದ ಹೊರಬರುತ್ತಾರೆ ಕಾರ್ಮಿಕರು; ಜವಾಬ್ದಾರಿ ವಹಿಸಿಕೊಂಡ ಸೇನೆ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts