More

    ಟಿ-20 ವಿಶ್ವಕಪ್​; ಟೀಂ ಇಂಡಿಯಾ ನಾಯಕ ಯಾರೆಂದು ಬಹಿರಂಗಪಡಿಸಿದ ಜಯ್​ ಷಾ

    ನವದೆಹಲಿ: ಜೂನ್​ ತಿಂಗಳಲ್ಲಿ ವೆಸ್ಟ್​ ಇಂಡೀಸ್​ ಹಾಗೂ ಯುಎಸ್​ಎ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ರೋಹಿತ್​ ಶರ್ಮಾ ನಾಯಕತ್ವದಲ್ಲಿ ಆಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಷಾ ತಿಳಿಸಿದ್ದಾರೆ.

    ರಾಜ್​ಕೋಟ್​ನಲ್ಲಿರುವ ಸೌರಾಷ್ಟ್ರ ಕ್ರಿಕೆಟ್​ ಸ್ಟೇಡಿಯಂ ಮರುನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಜಯ್​ ಷಾ ರೋಹಿತ್​ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಬಿಸಿಸಿಐ ಈ ಬಗ್ಗೆ ಅಧಿಕೃತವಾಗಿ ಪ್ರಕಟಿಸಿಲ್ಲ.

    ನಾವು 2023ರ ODI ವಿಶ್ವಕಪ್‌ನ ಫೈನಲ್‌ನಲ್ಲಿ ಸೋತಿರಬಹುದು. ಆದರೆ ನಾವು ಸತತ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಜನರ ಹೃದಯ ಗೆದ್ದಿದ್ದೇವೆ. ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತವು 2024 ರ ಟಿ 20 ವಿಶ್ವಕಪ್ ಗೆಲ್ಲಲಿದೆ ಎನ್ನುವ ವಿಶ್ವಾಸವಿದೆ ಎಂದು ಹೇಳುವ ಮೂಲಕ ಎದ್ದಿರುವ ವದಂತಿಗಳಿಗೆ ತೆರೆ ಎಳೆಯುವ ಕೆಲಸ ಮಾಡಿದ್ದಾರೆ.

    ಇದನ್ನೂ ಓದಿ: ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

    9ನೇ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯಗಳು ಜೂನ್ 4 ರಿಂದ 30ರ ವರೆಗೆ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿದೆ  ಲೀಗ್ ಹಂತದ ಕೆಲ ಪಂದ್ಯಗಳಿಗೆ ಯುಎಸ್​ಎ ಆತಿಥ್ಯವಹಿಸಿದರೆ, ಸೂಪರ್-8 ಹಂತದ ಎಲ್ಲಾ ಪಂದ್ಯಗಳು ವೆಸ್ಟ್ ಇಂಡೀಸ್​ನಲ್ಲಿ ಜರುಗಲಿದೆ.

    ಇನ್ನು ಭಾರತ ತಂಡವು ಜೂನ್ 5 ರಂದು ವಿಶ್ವಕಪ್ ಅಭಿಯಾನ ಆರಂಭಿಸಲಿದ್ದು, ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ನ್ಯೂಯಾರ್ಕ್​ ಆತಿಥ್ಯವಹಿಸಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts