More

    ಟಿ-20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಹಿಟ್​ಮ್ಯಾನ್​; ಏನದು?

    ಇಂದೋರ್​: ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಎರಡನೇ ಟಿ-20 ಪಂದ್ಯ ಇಂದೋರ್​ನ ಹೋಲ್ಕರ್​ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಪಂದ್ಯದ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್​ ಶರ್ಮಾ ಕ್ರಿಕೆಟ್​ ಇತಿಹಾಸದಲ್ಲೇ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

    ಟಿ-20 ಇತಿಹಾಸದಲ್ಲಿ ಟೀಂ ಇಂಡಿಯಾ ಪರ ಯಾವ ಆಟಗಾರನು 150 ಪಂದ್ಯಗಳಲ್ಲಿ ಕಣಕ್ಕಿಳಿದಿಲ್ಲ. 149 ಪಂದ್ಯಗಳನ್ನು ಆಡಿರುವ ರೋಹಿತ್​ ಶರ್ಮಾ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದರೆ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಎನಿಸಲಿದ್ದಾರೆ.

    ಟಿ-20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಹಿಟ್​ಮ್ಯಾನ್​; ಏನದು?

    ಇದನ್ನೂ ಓದಿ: ಕಪ್ಪು ಸೀರೆಯಲ್ಲಿ ಮಿಂಚಿದ ಮಿಲ್ಕಿಬ್ಯೂಟಿ ಆಶಿಕಾ ರಂಗನಾಥ್; ನಿಮ್ಮನ್ನು ನೋಡಿಯೇ ಈ ಹಾಡು ಬರೆದಿರುವುದು ಎಂದ ನೆಟ್ಟಿಗರು

    134 ಪಂದ್ಯಗಳನ್ನು ಆಡಿರುವ ಐರ್ಲೆಂಡ್​ನ ಪೌಲ್ ಸ್ಟೀರ್ಲಿಂಗ್ ಎರಡನೇ ಸ್ಥಾನದಲ್ಲಿದ್ದು, ಟಿ-20 ಕ್ರಿಕೆಟ್​ನಲ್ಲಿ 3438 ರನ್​ ಹಾಗೂ 20 ವಿಕೆಟ್ ಪಡೆದಿದ್ದಾರೆ. ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 3853 ರನ್​, 20 ವಿಕೆಟ್​ಗಳನ್ನು ಪಡೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

    ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಬಾರಿಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಒಟ್ಟು 115 ಟಿ20 ಪಂದ್ಯಗಳನ್ನಾಡಿರುವ ವಿರಾಟ್​ 4008 ರನ್​ ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 4 ಸಾವಿರ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts