More

    ಅಫ್ಘಾನಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಹಿಟ್​ಮ್ಯಾನ್​ ​

    ಮೊಹಾಲಿ: ಭಾರತ ಹಾಗೂ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಟೀಂ ಇಂಡಿಯಾ ಶುಭಾರಂಭ ಕಂಡಿದ್ದು, 6 ವಿಕೆಟ್​ಗಳ ಜಯ ಕಂಡಿದೆ. ಈ ಸರಣಿ ಮೂಲಕ ರೋಹಿತ್​ ಶರ್ಮಾ ಹಾಗೂ ವಿರಾಟ್​ ಕೊಹ್ಲಿ 14 ತಿಂಗಳ ಬಳಿಕ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.

    ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ಮಾಡಿದ ಅಫ್ಘಾನಿಸ್ತಾನ 158 ರನ್​ ಗಳಿಸಿತ್ತು. ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಪರ ರೋಹಿತ್ ಶರ್ಮಾಗೆ ವಿಶೇಷವಾದ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಮೊದಲ ಓವರ್​ನಲ್ಲೇ ರೋಹಿತ್ ಶೂನ್ಯಕ್ಕೆ ರನೌಟ್​ಗೆ ಬಲಿಯಾಗಬೇಕಾಯಿತು. ಇದರೊಂದಿಗೆ ನಾಯಕ ರೋಹಿತ್ ಶರ್ಮಾ ಹೆಸರಿಗೆ ಅನಗತ್ಯ ದಾಖಲೆಯೊಂದು ಸೇರ್ಪಡೆಯಾಯಿತು.

    Rohit Gill

    ಇದನ್ನೂ ಓದಿ: ಮಾನವೀಯತೆ ಮರೆತ ಯುವಕರು; ಮೂಕಪ್ರಾಣಿಯನ್ನು ಹೊಡೆದು ಕೊಂದರು

    ಈ ಪಂದ್ಯದಲ್ಲಿ ಯಾವುದೇ ರನ್ ಗಳಿಸದೇ ರನೌಟ್ ಆಗಿ ಪೆವಿಲಿಯನ್‌ಗೆ ಮರಳಿದ ರೋಹಿತ್, ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ ಟೀಂ ಇಂಡಿಯಾದ ಮೊದಲ ನಾಯಕ ಎಂಬ ಬೇಡದ ದಾಖಲೆಗೆ ರೋಹಿತ್ ಕೊರಳೊಡ್ಡಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಶೂನ್ಯಕ್ಕೆ ವಿಕೆಟ್​ ಒಪ್ಪಿಸಿದ ವಿಶ್ವ ಕ್ರಿಕೆಟ್​ನ 9ನೇ ನಾಯಕ ಎಂಬ ಕುಖ್ಯಾತಿಗೂ ರೋಹಿತ್ ಭಾಜನರಾದರು. ಅಂತಾರಾಷ್ಟ್ರೀಯ ಟಿ20ಯಲ್ಲಿ ರೋಹಿತ್ ಶರ್ಮಾ 11ನೇ ಬಾರಿಗೆ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದ್ದಾರೆ.

    ಈ ಪಂದ್ಯದಲ್ಲಿ ಶೂನ್ಯ ಸುತ್ತಿದರೂ ರೋಹಿತ್, ಆಟಗಾರನಾಗಿ 100 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಗೆದ್ದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರೊಂದಿಗೆ 14 ತಿಂಗಳ ಬಳಿಕ ಟಿ20ಯಲ್ಲಿ ಭಾರತದ ನಾಯಕತ್ವ ವಹಿಸಿಕೊಂಡಿರುವ ರೋಹಿತ್ ಶರ್ಮಾ ಇದೀಗ ಟಿ20ಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಅತ್ಯಂತ ಹಿರಿಯ ನಾಯಕ ಎನಿಸಿಕೊಂಡಿದ್ದಾರೆ. ರೋಹಿತ್ 36 ವರ್ಷ 256 ದಿನಗಳಲ್ಲಿ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts