More

    ಸಹಕಾರಿ ಚುನಾವಣೆಯಲ್ಲಿ ಸಿಇಒ ಪಾತ್ರ ಮಹತ್ವದ್ದು

    ಶಿವಮೊಗ್ಗ: ಸಹಕಾರಿ ಸಂಘಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ವೇಳೆ ಸಾಕಷ್ಟು ನಿಬಂಧನೆಗಳಿವೆ. ಇದರಲ್ಲಿ ಸಂಘಗಳ ಸಿಇಒ ಪಾತ್ರ ಮಹತ್ವದ್ದಾಗಿದೆ. ಇತ್ತೀಚೆಗೆ ಕೆಲವೊಂದು ಹೊಸ ನಿಯಮಗಳೂ ಬಂದಿವೆ. ಇದೆಲ್ಲವನ್ನೂ ಪಾಲಿಸದೇ ಇದ್ದರೆ ಚುಣಾವಣಾಧಿಕಾರಿ ಪೇಚಿಗೆ ಸಿಲುಕಬೇಕಾಗುತ್ತದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದರು.

    ಸಹಕಾರ ಸಂಘಗಳ ಚುನಾವಣಾ ಕಾರ್ಯಗಳಿಗೆ ನಿಯೋಜಿತರಾಗಿರುವ ರಿಟರ್ನಿಂಗ್ ಆಫೀಸರ್ ಹಾಗೂ ಸಂಘದ ಸಿಇಒಗಳಿಗೆ ಮಂಗಳವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಂಘದ ಚುನಾವಣಾ ಜವಾಬ್ದಾರಿಯಿರುತ್ತದೆ. ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯವರಿಗೆ ಚುನಾವಣೆಯಲ್ಲಿ ಯಾವುದೇ ಪಾತ್ರವಿಲ್ಲ ಎಂದರು.
    ಚುನಾವಣೆ ನಡೆಸಬೇಕಿರುವ ಸಹಕಾರಿ ಸಂಘಗಳಲ್ಲಿ ಈಗಾಗಲೇ ಹಲವು ಪ್ರಕ್ರಿಯೆಗಳು ಆರಂಭವಾಗಿವೆ. ಚುನಾವಣಾ ಕೆಲಸಕ್ಕೆ ನಿಯೋಜಿತರಾದವರಿಗೆ ತರಬೇತಿ ನೀಡಲೇಬೇಕೆಂದು ಸಹಕಾರ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ಚುನಾವಣೆಗೆಂದು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಸುಸ್ತಿದಾರ ಸದಸ್ಯರಿಗೆ ನೋಟಿಸ್ ನೀಡಬೇಕು. ಸದಸ್ಯರು ಸಂಘದಲ್ಲಿ ಕನಿಷ್ಠ ವ್ಯವಹಾರ ಮಾಡಿರಲೇಬೇಕೆಂಬ ನಿಯಮವಿದೆ. ಅಂತಹವರಿಗೆ ಮಾತ್ರ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು.
    ಸಹಕಾರ ಸಂಘದ ಸಿಇಒ ಎಲ್ಲ ಮಾಹಿತಿ ಪಡೆದುಕೊಳ್ಳಬೇಕು. ಪಾರದರ್ಶಕವಾಗಿ ಹಾಗೂ ಸಮಪರ್ಕವಾಗಿ ಚುನಾವಣೆ ನಡೆಯಲಿ ಎಂಬ ಕಾರಣಕ್ಕೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
    ಸಹಕಾರ ಯೂನಿಯನ್ ಅಧ್ಯಕ್ಷ ಕೆ.ರತ್ನಾಕರ್ ಅಧ್ಯಕ್ಷತೆ ವಹಿಸಿದ್ದರು. ಸಹಕಾರ ಸಂಘಗಳ ನಿವೃತ್ತ ಉಪನಿರ್ದೇಶಕ ಜಿ.ಕೆ.ರಾಮಪ್ಪ, ಚುನಾವಣಾ ಪೂರ್ವ ಸಿದ್ದತೆ ಮತ್ತು ಮತದಾರರ ಪಟ್ಟಿ ತಯಾರಿಸುವ ಕುರಿತು ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts