blank

ಗ್ರಾಮಾಭಿವೃದ್ಧಿಯಲ್ಲಿ ಗ್ರಾಪಂ ಸದಸ್ಯರ ಪಾತ್ರ ಹಿರಿದು

blank

ಹುಣಸೂರು: ಗ್ರಾಮ ಪಂಚಾಯಿತಿ ಸದಸ್ಯರು ಸರ್ಕಾರಿ ಯೋಜನೆಗಳನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದಲ್ಲಿ ಜನಪರ ನಾಯಕರಾಗಿ ಬೆಳೆಯಲು ಸಾಧ್ಯ ಎಂದು ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ನಿರ್ದೇಶಕ ಮತ್ತು ಮೈರಾಡ ಸಂಸ್ಥೆಯ ಮೈಸೂರು ವಿಭಾಗದ ಮುಖ್ಯಸ್ಥ ಅಶ್ರಫುಲ್ ಹಸನ್ ಅಭಿಪ್ರಾಯಪಟ್ಟರು.

ಕರ್ನಾಟಕ ಗ್ರಾಪಂ ಸದಸ್ಯರ ಮಹಾ ಒಕ್ಕೂಟದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ತಾಲೂಕಿನ ನಾಗಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ಗ್ರಾಪಂ ಸದಸ್ಯರಿಗೆ ಸೋಮವಾರ ಆಯೋಜಿಸಿದ್ದ ಎರಡು ದಿನಗಳ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಗ್ರಾಮಗಳ ಸಮಗ್ರ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಪಾತ್ರ ಶಾಸಕ, ಸಂಸದರಿಗಿಂತಲೂ ಬಹು ಮುಖ್ಯವಾದದ್ದು. ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರ ಬದುಕನ್ನು ಹಸನುಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದ ಮೂಲಕ ಯಶಸ್ವಿಯಾಗಿ ಜಾರಿಗೊಳಿಸಿದಲ್ಲಿ ನೀವು ಸಹ ಜನಪರ ನಾಯಕರಾಗಿ ಬೆಳೆಯಲು ಸಾಧ್ಯವಿದೆ. ನಿಮ್ಮ ಅಧಿಕಾರ ಮತ್ತು ವ್ಯಾಪ್ತಿಯ ಸಂಪೂರ್ಣ ಪರಿಚಯ ಮಾಡಿಕೊಳ್ಳಿ. ಈ ನಿಟ್ಟಿನಲ್ಲಿ ಸ್ಥಳೀಯ ಸಂಘ, ಸಂಸ್ಥೆಗಳ ಸಹಕಾರ ಪಡೆಯಬೇಕು ಎಂದು ಹೇಳಿದರು.

ಇದೇ ವೇಳೆ ಮೈರಾಡ ಸಂಸ್ಥೆಯಿಂದ ಹಮ್ಮಿಕೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ವಲಯ ಅರಣ್ಯ ಅಧಿಕಾಧಿ ಅಭಿಷೇಕ್ ಮಾತನಾಡಿ, ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗಟ್ಟುವಲ್ಲಿ ಗ್ರಾಪಂನ ಜವಾಬ್ದಾರಿ ಪ್ರಮುಖವಾದದ್ದು. ಇಲಾಖೆ ಜತೆಗೆ ನಿರಂತರ ಸಂಪರ್ಕ ಇಟ್ಟುಕೊಂಡು ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು ಹೇಳಿದರು.

ವ್ಯಕ್ತಿತ್ವ ವಿಕಸನ ಕುರಿತು ಸಂಪನ್ಮೂಲ ವ್ಯಕ್ತಿ ಲಲಿತಾ ಮಾತನಾಡಿ, ಪಂಚಾಯತ್ ಸದಸ್ಯರು ತಮ್ಮ ವೈಯಕ್ತಿಕ ಜೀವನಕ್ಕಿಂತಲೂ ಹೆಚ್ಚು ಸಮಾಜ ಸೇವೆಗಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಹಲವು ಒತ್ತಡಗಳಿಗೆ ಒಳಗಾಗುವ ಸಾಧ್ಯತೆ ಇದೆ. ಹಾಗಾಗಿ ವೈಯಕ್ತಿಕ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಮಾನಸಿಕವಾಗಿ ಗಟ್ಟಿಗೊಳ್ಳುವ ಒಳ್ಳೆಯ ಅಭ್ಯಾಸಗಳನ್ನು ರೂಡಿಸಿಕೊಂಡು ಮಾದರಿ ನಾಯಕರಾಗಬೇಕೆಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ರಾಜಾ ಹುಣಸೂರು ಮಾತನಾಡಿ, ಗ್ರಾಮ ಪಂಚಾಯಿತಿ ಸದಸ್ಯರು ಪಂಚಾಯತ್ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸಬೇಕಾಗಿದೆ. ಸದಸ್ಯರ ಅಧಿಕಾರಾವಧಿ ಮುಗಿದ ನಂತರವೂ ಗ್ರಾಮದ ಅಭಿವೃದ್ಧಿಯಲ್ಲಿ ತಾವುಗಳು ಮತದಾರರಾಗಿ ತಮ್ಮ ಹಕ್ಕನ್ನು ಚಲಾಯಿಸುವ ನಿಟ್ಟಿನಲ್ಲಿ ನಿರಂತರ ಅಧ್ಯಯನ ಮಾಡಿ ತಮ್ಮ ವ್ಯಾಪ್ತಿಯ ಯುವಕರನ್ನು, ಮಹಿಳೆಯರನ್ನು ಜಾಗೃತಗೊಳಿಸುವ ಕಾರ್ಯನಿರ್ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಗ್ರಾಮಸಭಾ ಸದಸ್ಯರ ವೇದಿಕೆಗಳನ್ನು ರಚಿಸಿ ಜನರ ಸಮಸ್ಯೆಗಳಿಗೆ ಧ್ವನಿ ಆಗುವಂತೆ ಕಿವಿಮಾತು ಹೇಳಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಒಕ್ಕೂಟದ ಜಿಲ್ಲಾಧ್ಯಕ್ಷ ಯದುನಾಡು ನಾಗರಾಜು ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಡತೊರೆ ಮಹೇಶ್, ಹುಣಸೂರು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಅಗ್ರಹಾರ ರಾಮೇಗೌಡ ಹಾಗೂ ಜಿಲ್ಲಾ ಘಟಕದ 40ಕ್ಕೂ ಹೆಚ್ಚು ಪದಾಧಿಕಾರಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

 

Share This Article

ಪ್ರಿ-ಡಯಾಬಿಟಿಸ್​ ಇರುವವರು ಈ ಆಹಾರದಿಂದ ಅಂತರ ಕಾಯ್ದುಕೊಳ್ಳಿ; ಮಿಸ್​ ಆದ್ರೆ ಅಪಾಯ ತಪ್ಪಿದ್ದಲ್ಲ | Health Tips

ಇಂದಿನ ಕಾಲದಲ್ಲಿ ಮಧುಮೇಹವು ಒಂದು ಸಾಮಾನ್ಯ ಸಮಸ್ಯೆಯಾಗಿದ್ದು ಅದನ್ನು ಗುಣಪಡಿಸಲಾಗದು. ಪ್ರಪಂಚದಾದ್ಯಂತ ಹೆಚ್ಚಿನ ಸಂಖ್ಯೆಯ ಜನರು…

ಕಣ್ಣಿನ ಸುತ್ತಲಿನ ಕಪ್ಪು ಕಲೆಗಳು ಏನನ್ನೂ ಸೂಚಿಸುತ್ತದೆ; ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಕಪ್ಪು ಕಣ್ಣು(Black Eye) ಎಂಬುದು ಕಣ್ಣು ಅಥವಾ ಸುತ್ತಮುತ್ತಲಿನ ಅಂಗಾಂಶಗಳಿಗೆ ಗಾಯದ ನಂತರ ಕಣ್ಣಿನ ಸುತ್ತ…

ಸೇಬು ಹಣ್ಣು ತಿಂದ ತಕ್ಷಣ ನೀರು ಕುಡಿಯಬಾರದು! Apple ತಿಂದು ಯಾಕೆ ನೀರು ಕುಡಿಯಬಾರದು ಗೊತ್ತಾ?

Apple: ಸಾಮಾನ್ಯವಾಗಿ ದಿನಕ್ಕೆ ಒಂದು ಸೇಬು ಹಣ್ಣು ತಿಂದರೆ ವೈದ್ಯರ ಬಳಿಗೆ ಹೋಗುವ ಅಗತ್ಯವಿಲ್ಲ ಎಂದು…