ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಪ್ರಮುಖ ಆಯಕಟ್ಟಿನ ಹುದ್ದೆಗಳಿಗೆ ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಇತ್ತೀಚೆಗೆ ಎಡಿಜಿಪಿ ಹುದ್ದೆಗೆ ಮುಂಬಡ್ತಿ ಪಡೆದಿದ್ದ ಡಿ. ರೂಪಾ ಮೌದ್ಗಿಲ್ ಅವರನ್ನು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೊರ್ಸ್(ಬಿಎಂಟಿಎ್) ಮುಖ್ಯಸ್ಥೆಯಾಗಿ ವರ್ಗಾವಣೆ ಮಾಡಿದೆ. ಈ ಹಿಂದೆ ರಾಜ್ಯ ರೇಷ್ಮೆ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದರು.
ಅದೇ ರೀತಿಯಾಗಿ ರೋಹಿಣಿ ಸಿಂಧೂರಿಯನ್ನು ಕಾರ್ಮಿಕ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿದೆ. ಇದೆ ವೇಳೆ ಎಸ್.ಬಿ. ಶೆಟ್ಟೆಣ್ಣವರ್- ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಮತ್ತು ಅಕ್ರಮ್ ಪಾಷಾ ಅವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.