

ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಭಾರತದಲ್ಲಿ ಸಾಂಕ್ರಮಿಕವಲ್ಲದ ರೋಗಗಳಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಮಾನ್ಯ ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಮಾಡಲು ಸಾಧ್ಯವಾದರೆ ರೋಗ ನಿರ್ಮೂಲನೆ ಸಾಧ್ಯ. ಈ ನಿಟ್ಟಿನಲ್ಲಿ ಆರೋಗ್ಯ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಡಾ. ಜಯಕುಮಾರ್ ಶೆಟ್ಟಿ ಹೇಳಿದರು.
ರೋಟರಿ ಕ್ಲಬ್ ಬಂಟ್ವಾಳ ಟೌನ್ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಶ್ರೀ ದುರ್ಗಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಹಾಗೂ ಪ್ರಜ್ಞಾ ಸಲಹಾ ಕೇಂದ್ರ ಪ್ರಾಂಶುಪಾಲೆ ವಿಜಯಾ ಶುಭಹಾರೈಸಿದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ವಚನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯೆನಪೋಯ ಆಸ್ಪತ್ರೆಯ ವೈದ್ಯ ಡಾ.ಮಹಮ್ಮದ್ ಸಿರಾಸ್, ಸುರೇಶ್ ಸಾಲ್ಯಾನ್, ನಾಗೇಶ್ ಎಂ. ಉಪಸ್ಥಿತರಿದ್ದರು. ಮೇರಿ ಲಿಲ್ಲಿ ವಂದಿಸಿದರು. ಸಮತಾ ಕಿಶೋರ್ ಕಾರ್ಯಕ್ರಮ ನಿರೂಪಿಸಿದರು. ರಶ್ಮಿ ಶೆಟ್ಟಿ ಹಾಗೂ ರೋಟರಿ ಸದಸ್ಯರು ಸಹಕರಿಸಿದರು. ಮಂಗಳೂರು ಪ್ರಜ್ಞಾ ಸಲಹಾ ಕೇಂದ್ರ, ಶ್ರೀ ದುರ್ಗಾ ಚಾರಿಟೆಬಲ್ ಟ್ರಸ್ಟ್, ದಡ್ಡಲಕಾಡು, ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಶನ್ ಬಂಟ್ವಾಳ ಸಮಿತಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ವಲಯ ಹಾಗೂ ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ದೇರಳಕಟ್ಟೆ ಯೇನಪೋಯದ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಸಹಯೋಗ ವಹಿಸಿದ್ದವು.