ಬೀದಿನಾಯಿಗಳ ಸಂತತಿ ನಿಯಂತ್ರಣ ಅಗತ್ಯ - ಶಾಸಕ ಅಶೋಕ್ ರೈ ಹೇಳಿಕೆ - ಸಂತಾನಶಕ್ತಿ ಹರಣ ಚಿಕಿತ್ಸೆ

PTR_9 JUL_3
Published on


ಪುತ್ತೂರು: ಬೀದಿನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ಧವಾಗಿದ್ದು, ಅವುಗಳ ನಿಯಂತ್ರಣ ಕೆಲಸ ನಡೆಯುತ್ತಿರುವುದು ಉತ್ತಮ ಕಾರ್ಯವಾಗಿದೆ. ಸಂತಾನ ಹರಣದಿಂದ ಬೀದಿನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.


ಮಂಗಳವಾರ ಪೋಳ್ಯದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮಧ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ವತಿಯಿಂದ ನಡೆದ ಸಾಕುನಾಯಿಗಳಿಗೆ ಉಚಿತವಾಗಿ ಸಂತಾನಶಕ್ತಿ ಹರಣ ಚಿಕಿತ್ಸೆ ಸೌಲಭ್ಯದಲ್ಲಿ ಭಾಗವಹಿಸಿ ಮಾತನಾಡಿದರು.


ಮುಳಿಯ ಜ್ಯುವೆಲ್ಸ್ ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಅಪಘಾತಕ್ಕೊಳಗಾದ ನಾಯಿಗಳಿಗೆ ತುರ್ತು ಚಿಕಿತ್ಸೆ ನೀಡುವ ಜತೆಗೆ ಆರೋಗ್ಯ ಸರಿಯಿಲ್ಲದ ನಾಯಿಗಳ ಆರೈಕೆ ಮಾಡುವ ಕೇಂದ್ರದ ಸ್ಥಾಪನೆಯ ಯೋಚನೆಯನ್ನು ಹಾಕಿಕೊಳ್ಳಲಾಗಿದೆ. ಸಂತಾನಶಕ್ತಿ ಹರಣ ಚಿಕಿತ್ಸೆಯ ಬಳಿಕ ಅವುಗಳ ಪಾಲನೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಮೂಲಕ ಬೀದಿನಾಯಿಗಳ ಸಂಖ್ಯೆ ಕಡಿಮೆ ಮಾಡುವ ಕಾರ್ಯ ನಡೆಯುತ್ತದೆ ಎಂದು ತಿಳಿಸಿದರು.

೧೨೫ಕ್ಕೂ ಅಽಕ ನಾಯಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ ನೀಡಲಾಯಿತು. ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಮಲ್ಪೆ ಮಧ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net