

ಬೆಂಗಳೂರು: ಸಾಲು ಸಾಲು ರಜೆ ಹಿನ್ನಲೆಯಲ್ಲಿ ನಗರದ ಜನರು ಊರುಗಳತ್ತ ಮುಖ ಮಾಡಿದ್ದಾರೆ. ಇದರಿಂದ ಬೆಂಗಳೂರು ನಗರದಾದ್ಯಂತ ಪ್ರಮುಖ ರಸ್ತೆಗಳಲ್ಲಿ ಬುಧವಾರ ಸಂಜೆಯಿಂದ ಸಂಚಾರ ದಟ್ಟಣೆ ಕಂಡು ಬಂತು. ವಾಹನ ಸವಾರರು ಪರದಾಡುವಂತಾಯಿತು.
ನಗರದ ಹೃದಯ ಭಾಗದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನಲೆ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದಲೇ 250 ಬಸ್ ಕಾರ್ಯಾಚರಣೆ ನಡೆಸುತ್ತಿದೆ.
ಗುರುವಾರ ಸ್ವಾತಂತ್ರ್ಯ ದಿನಾಚರಣೆ, ಶುಕ್ರವಾರ ವರಮಹಾಲಕ್ಷ್ಮಿ ಹಬ್ಬ ಇದ್ದು, ಭಾನುವಾರ ರಜೆಯಿದ್ದು ಊರಿನತ್ತ ಹೊರಟವರ ಸಂಖ್ಯೆ ಹೆಚ್ಚಾಗಿತ್ತು.
ಮಧ್ಯರಾತ್ರಿಯಾದರು ಹೆದ್ದಾರಿಗಳಲ್ಲಿ ವಾಹನಗಳ ಕಡಿಮೆಯಾಗಿರಲಿಲ್ಲ. ಕೆಎಸ್ಆರ್ಟಿಸಿಯಿಂದ ಹೆಚ್ಚುವರಿ 450 ಬಸ್ಗಳು ಕಾರ್ಯಾಚರಣೆ ನಡೆಸುತ್ತಿದ್ದು, ರಾಜ್ಯದ ಒಳಗಡೆ ಹೆಚ್ಚುವರಿಯಾಗಿ 450 ಹಾಗೂ ಅಂತರರಾಜ್ಯಕ್ಕೆ 60 ಬಸ್ಗಳನ್ನು ನಿಯೋಜನೆ ಮಾಡಲಾಗಿದೆ.