ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಬರ್ಬರ ಹತ್ಯೆ: ಕಾಡಿನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆ

Aluminium Babu
Published on

ಬೆಂಗಳೂರು: ನಟೋರಿಯಸ್​ ರೌಡಿಶೀಟರ್ ಸುರೇಶ್​ ಬಾಬು ಅಲಿಯಾಸ್​ ಅಲ್ಯೂಮಿನಿಯಂ ಬಾಬು ಬರ್ಬರ ಹತ್ಯೆಯಾಗಿದ್ದು, ಆತನ ಶವ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕಣಿಕೋಟೆ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.

ನಿನ್ನೆ (ಮೇ 20) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ. ಅಲ್ಯೂಮಿನಿಯಂ ಬಾಬು ಜಯನಗರ ಪೊಲೀಸ್​ ಠಾಣೆಯ ರೌಡಿಶೀಟರ್ ಆಗಿದ್ದ. ಕೊಲೆ, ಸುಲಿಗೆ, ಬೆದರಿಕೆ ಹಾಗೂ ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬಾಬು ಭಾಗಿಯಾಗಿದ್ದ.

ತಿಲಕ್ ನಗರದ ಜಲ್ಲಿ ವೆಂಕಟೇಶ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ಅಲ್ಯೂಮಿನಿಯಂ ಬಾಬು, ಇತ್ತೀಚಿಗಷ್ಟೇ ತಮಿಳುನಾಡು ಕಡೆ ವಾಸ್ತವ್ಯ ಬದಲಿಸಿದ್ದ. ಇದೀಗ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಡೆಂಕಣಿಕೋಟೆ ಸಮೀಪದ ಕಾಡಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಅರೆ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಹತ್ಯೆ ನಡೆಸಿದ ಬಳಿಕ ಶವವನ್ನು ಕಾಡಿನಲ್ಲಿ ಎಸೆದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ತಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net