

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ರೌಡಿಶೀಟರ್ ಒಬ್ಬ ಬರ್ಬರವಾಗಿ ಕೊಲೆಯಾಗಿದ್ದಾನೆ. ಬೈಕ್ನಲ್ಲಿ ಬಂದವರು ಆತನ ಮೇಲೆ ಎರಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಪರಾರಿಯಾಗಿದ್ದಾರೆ.
ಜೆ.ಸಿ. ಆನಂದ್ (36) ಕೊಲೆಯಾದ ರೌಡಿಶೀಟರ್. ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ಇಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಈ ಕೊಲೆ ನಡೆದಿದೆ. ಕೊಲೆಗೀಡಾದವ ಪೀಣ್ಯ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.