More

  ದುಷ್ಕರ್ಮಿಗಳಿಂದ ರೌಡಿಶೀಟರ್ ಹತ್ಯೆ

  ಶ್ರೀರಂಗಪಟ್ಟಣ: ತಾಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕಾರಿನಲ್ಲಿ ಆಗಮಿಸಿದ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿದ್ದಾರೆ.

  ಗ್ರಾಮದ ವಕೀಲ ನಾಗೇಂದ್ರ ಅವರ ಪುತ್ರ ಪ್ರಜ್ವಲ್‌ಗೌಡ ಅಲಿಯಾಸ್ ಪಾಪು(28) ಕೊಲೆಯಾದವ. ಈತ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದು, ವಿವಾಹದ ಬಳಿಕ ಗ್ರಾಮದಲ್ಲಿ ಹೈನುಗಾರಿಕೆ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಭಾನುವಾರ ಬೆಳಗ್ಗೆ 8.30ರ ಸಮಯದಲ್ಲಿ ಗ್ರಾಮದ ಬ್ಯಾಂಕ್ ರಸ್ತೆಯ ಹಾಲಿನ ಡೇರಿ ಸಮೀಪದ ವೃತ್ತದಲ್ಲಿ ನಿಂತಿದ್ದ ಈತನ ಮೇಲೆ ಇನ್ನೋವಾ ಕಾರಿನಲ್ಲಿ ಆಗಮಿಸಿದ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ತಲೆಯ ಭಾಗವನ್ನು ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

  ವಿಷಯ ತಿಳಿದು ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಮುರಳಿ, ಇನ್ಸ್‌ಪೆಕ್ಟರ್ ಬಿ.ಎಸ್.ಪ್ರಕಾಶ್ ಪ್ರಕರಣದ ಕುರಿತು ಮಾಹಿತಿ ಕಲೆಹಾಕಿದ್ದು, ಆರೋಪಿಗಳ ಸೆರೆಗೆ ವಿಶೇಷ ತಂಡ ರಚಿಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts