ಬೆಂಗಳೂರು: ಐಪಿಎಲ್ 17ನೇ ಸೀಸನ್ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಐಪಿಎಲ್ ನಕಲಿ ಟಿಕೆಟ್ ಮಾರಾಟ ಜಾಲ ಪತ್ತೆ: ಏಳು ಜನರ ಬಂಧನ
ಆರ್ಸಿಬಿ ತಂಡ ಪ್ರಸ್ತುತ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಲಕ್ನೋ ತಂಡವು ಭರ್ಜರಿ ಗೆಲುವು ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ. ಹೀಗಾಗಿ ಉಭಯ ತಂಡಗಳಿಗೆ ಅದರಲ್ಲಿಯೂ ಅಂಕಪಟ್ಟಿಯ ಆಧಾರದ ಮೇಲೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಈಗಾಗಲೇ ಟಾಸ್ ಆಗಿದ್ದು, ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೇಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
🚨 Toss Update 🚨@RCBTweets elect to bowl against @LucknowIPL
Follow the Match ▶️ https://t.co/ZZ42YW8tPz#TATAIPL | #RCBvLSG pic.twitter.com/aquuVQEtm5
— IndianPremierLeague (@IPL) April 2, 2024
ಈ ಪಂದ್ಯಕ್ಕಾಗಿ ಆರ್ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಅಲ್ಝಾರಿ ಜೋಸೆಫ್ ಸ್ಥಾನದಲ್ಲಿ ಎಡಗೈ ವೇಗಿ ರೀಸ್ ಟೋಪ್ಲಿ ಕಣಕ್ಕಿಳಿದಿದ್ದಾರೆ.
ಆರ್ಸಿಬಿ ಪ್ಲೇಯಿಂಗ್ 11: ಫಾಫ್ ಡು ಪ್ಲೆಸಿಸ್(C), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ , ಅನುಜ್ ರಾವತ್ (WK), ಕರಣ್ ಶರ್ಮಾ, ರಸ್ಸೆ ಟೋಪ್ಲಿ, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್.
ಲಕ್ನೋ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮಯಾಂಕ್ ಯಾದವ್.
IPL 2024: ರೋಹಿತ್ ಶರ್ಮಾ ವಿಕೆಟ್ಗೆ ಸಂಭ್ರಮಿಸಿದ್ದ ಸಿಎಸ್ಕೆ ಅಭಿಮಾನಿಯನ್ನು ಕೊಲೆಗೈದ MI ಫ್ಯಾನ್ಸ್