ಇದಕ್ಕೆ ಸಂಬಂಧಿಸಿದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಆದರೆ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಹೈದರಾಬಾದ್ ನ ಬೀಬಿ ಬಜಾರ್ ರಸ್ತೆಯಲ್ಲಿರುವ ಮೊಘಲ್ ಪುರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ರಾಯಲ್ ಎನ್‌ಫೀಲ್ಡ್ ಬೈಕ್ ಅನ್ನು ನಿಲ್ಲಿಸಿದ್ದ. ಅಷ್ಟರಲ್ಲಿ ಬೈಕ್ ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ.
ಇದನ್ನು ಗಮನಿಸಿದ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಬೆಂಕಿ ನಂದಿಸಲು ಯತ್ನಿಸಿದರು. ಆದರೆ ಬೈಕ್ ಏಕಾಏಕಿ ಸ್ಫೋಟಗೊಂಡಿದೆ. ಇದರ ಪರಿಣಾಮವಾಗಿ ಅಲ್ಲಿಗೆ ಬಂದಿದ್ದ ಪೊಲೀಸ್ ಅಧಿಕಾರಿಯೊಬ್ಬರಿಗೆ ಬೆಂಕಿ ತಗುಲಿದೆ. ಆದರೆ ಸ್ಥಳೀಯರು ಸಕಾಲದಲ್ಲಿ ಅವರ ನೆರವಿಗೆ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಎನ್‌ಫೀಲ್ಡ್ ಬೈಕ್ ಸ್ಫೋಟಗೊಂಡಿದ್ದನ್ನು ಅಲ್ಲಿದ್ದ ಕೆಲವರು ಸ್ಮಾರ್ಟ್ ಫೋನ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದೀಗ ವೀಡಿಯೋ ವೈರಲ್ ಆಗುತ್ತಿದೆ.