

ಕೋಟ: ಕೋಟತಟ್ಟು ಗ್ರಾಪಂ ವತಿಯಿಂದ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಇತ್ತೀಚೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಕಾಮಗಾರಿ ಪ್ರಯೋಜನ ಪಡೆದ ಫಲಾನುಭವಿಗಳಿಗೆ ಪಂಚಾಯಿತಿ ವತಿಯಿಂದ ಶ್ಲಾಘನೀಯ ಪತ್ರ ನೀಡುವ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಪಟ್ಟಂತೆ ರೋಜ್ಗಾರ್ ದಿನಾಚರಣೆ ಮಾಹಿತಿ ಕಾರ್ಯಾಗಾರ ನಡೆಯಿತು.
ದನದ ಹಟ್ಟಿ, ಕೃಷಿ ಬಾವಿ, ಬಚ್ಚಲ ಗುಂಡಿ, ಗೊಬ್ಬರಗುಂಡಿ, ಕೋಳಿ ಶೆಡ್ ಇತ್ಯಾದಿ ರಚನೆಗೆ ಸಹಾಯಧನ ಪಡೆಯುವ ಬಗ್ಗೆ ತಾಪಂ ಸಹಾಯಕ ನಿರ್ದೇಶಕ ಮಹೇಶ್, ಮಾಹಿತಿ ನೀಡಿದರು.
ಪಂಚಾಯಿತಿ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ಅಧ್ಯಕ್ಷತೆ ವಹಿಸಿದ್ದರು. ಕೋಟತಟ್ಟು ಗ್ರಾಪಂ ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ರವೀಂದ್ರ ತಿಂಗಳಾಯ, ಅಶ್ವಿನಿ, ವಿದ್ಯಾ, ಕಾರ್ಯದರ್ಶಿ ಸುಮತಿ ಅಂಚನ್, ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಪಿಡಿಒ ರವೀಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.