ಮಕ್ಕಳ ಕೈಯಿಂದ ಶೌಚಾಲಯ ಸ್ವಚ್ಛ ಮಾಡಿಸಿದ್ದಕ್ಕೆ ಕಾಂಗ್ರೆಸ್ ಶಾಸಕಿ ತೀವ್ರ ಆಕ್ಷೇಪ…

toilet
Published on

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಮಕ್ಕಳ ಕೈಯಿಂದಲೇ ಶೌಚಾಲಯ ಸ್ವಚ್ಛ ಮಾಡಿಸಿದ್ದಕ್ಕೆ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿ ನಿಲಯದ ಶೌಚಾಲಯವನ್ನ ನಿತ್ಯ ವಿದ್ಯಾರ್ಥಿಗಳಿಂದಲೇ ಸ್ವಚ್ಛಗೊಳಿಸಲಾಗುತ್ತಿದೆ. ಇದಕ್ಕೆ ವಿರೋಧಿಸಿದರೆ ಶೌಚಾಲಯಕ್ಕೆ ಬೀಗ ಹಾಕಲಾಗುತ್ತದೆ. ಮಲಗುವ ಕೊಣೆಯ ಕರೆಂಟ್ ಕಟ್ ಮಾಡಲಾಗುತ್ತದೆ. ಸಾಲದ್ದಕ್ಕೆ ನಿತ್ಯವೂ ವಿದ್ಯಾರ್ಥಿಗಳ ಕೈಯಲ್ಲೇ ಅಡುಗೆ ಸಹ ಮಾಡಿಸಲಾಗುತ್ತದೆ. ಈ ಮೂಲಕ ಮಕ್ಕಳಿಗೆ ಕಿರುಕುಳ ಕೊಡಲಾಗುತ್ತಿದೆ. ವಿದ್ಯಾರ್ಥಿ ನಿಲಯದ ವಾರ್ಡನ್ ಹಾಗೂ ತಾಲ್ಲೂಕು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೌಮ್ಯಾ ರೆಡ್ಡಿ ಆಗ್ರಹಿಸಿದ್ದಾರೆ.

ಕೂಡಲೇ ವಾರ್ಡನ್ ಹಾಗೂ ತಾಲ್ಲೂಕು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಿಗೆ ಪತ್ರ ಬರೆದಿರುವ ಸೌಮ್ಯಾ ರೆಡ್ಡಿ, ಅದನ್ನೇ ಟ್ವೀಟ್ ಕೂಡ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net