More

    ಸಿಎಂ ಬೆಂಗಾವಲು ವಾಹನದ ಹಿಂದೆ ಹೋಗ್ತಿದ್ದ ಕಾರಿನಲ್ಲಿ ಸಾಗಿಸುತ್ತಿದ್ದ ಒಂದು ಕೋಟಿ ರೂ. ವಶ

    ಇಟಾನಗರ: ಲೋಕಸಭೆ ಚುನಾವಣೆ ಹತ್ತಿವಾಗುತ್ತಿದ್ದಂತೆ ಪೊಲೀಸರು ಚೆಕ್​​ ಪೋಸ್ಟ್​​ಗಳನ್ನು ನಿರ್ಮಿಸಿ ವಾಹನಗಳ ತಪಾಸಣೆ ಶುರು ಮಾಡಿದ್ದು, ಚುನಾವಣಾ ಅಕ್ರಮಗಳಿಗೆ ಬ್ರೇಕ್ ಹಾಕುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಇದರ ನಡುವೆ ಪೊಲೀಸರ ಕಣ್ಣು ತಪ್ಪಿಸಿ ಸಾಗಿಸುತ್ತಿದ್ದ ಒಂದು ಕೋಟಿ ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಇದನ್ನೂ ಓದಿ: ಹ್ಯಾಟ್ರಿಕ್​ ಸೋಲು: ಸೋಮನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಹಾರ್ದಿಕ್ ಪಾಂಡ್ಯ! 

    ಅರುಣಾಚಲ ಪ್ರದೇಶದಲ್ಲಿ ಭರ್ಜರಿ ಪ್ಲಾನ್​ ಮಾಡಿ ಒಂದು ಕೋಟಿ ರೂಪಾಯಿ ಸಾಗಿಸುತ್ತಿದ್ದ ಪ್ರಯತ್ನ ವಿಫಲವಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳು ಬರೋಬ್ಬರಿ 1 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಅರುಣಾಚಲ ಪ್ರದೇಶದ ಲಾಂಗ್‌ಡಿಂಗ್‌ನಲ್ಲಿರುವ ಚೆಕ್‌ಪೋಸ್ಟ್‌ನಲ್ಲಿ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಬೆಂಗಾವಲು ವಾಹನದ ನೆರಳಿನಿಂದ ಒಂದು ಕೋಟಿ ರೂಪಾಯಿ ಮೊತ್ತದ ಗಮನಾರ್ಹ ಮೊತ್ತವನ್ನು ಗುರುವಾರ ವಶಪಡಿಸಿಕೊಳ್ಳಲಾಯಿತು.

    ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು. ಈ ವೇಳೆ ಸಿಎಂ ಬೆಂಗಾವಲು ವಾಹನದ ಹಿಂದೆ ಕೋಟ್ಯಾಂತರ ರೂಪಾಯಿ ಹಣ ಇದ್ದ ಕಾರು ಅದೇ ವೇಗದಲ್ಲಿ ಚಲಿಸುತ್ತಿತ್ತು. ಈ ವೇಳೆ ಕಾರನ್ನು ತಡೆದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಕಾರಿನಲ್ಲಿ ಕಂತೆ, ಕಂತೆ ನೋಟಗಳನ್ನು ವಶಪಡಿಸಿಕೊಂಡ ಚುನಾವಣಾ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

    ಈ ವೇಳೆ ಸಿಎಂ ಬೆಂಗಾವಲು ವಾಹನದ ಹಿಂದೆ ಪೊಲೀಸರಿಗೆ ಕಣ್ಣುತಪ್ಪಿಸಿ ತೆರಳುತ್ತಿದ್ದ ಕಾರಿನ ಸಂಖ್ಯೆ ಎಎಸ್-01-ಇಟಿ-5252 ಎಸ್‌ಯುವಿ ಕಾರನ್ನು ಕನುಬರಿ ಚೆಕ್‌ಪೋಸ್ಟ್‌ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    ಹೊಸ ಸಿನಿಮಾಗಾಗಿ ‘ನ್ಯಾಚುರಲ್ ಸ್ಟಾರ್’ ನಾನಿ ಪಡೆದ ಸಂಭಾವನೆ ಎಷ್ಟು ಗೊತ್ತಾ? ಕೇಳಿದ್ರೆ ದಂಗಾಗ್ತೀರಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts