More

    ದೆಹಲಿ ಚಲೋ ಪ್ರತಿಭಟನೆ; ಮೃತ ರೈತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಕುಟುಂಬದವರಿಗೆ ಸರ್ಕಾರಿ ಉದ್ಯೋಗ: ಪಂಜಾಬ್ ಸಿಎಂ

    ಅಮೃತಸರ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ದೆಹಲಿ ಗಡಿ ಭಾಗಗಳಲ್ಲಿ ನಡೆಸುತ್ತಿರುವ ಪ್ರತಿಭಟಯಲ್ಲಿ ಮೃತಪಟ್ಟ ರೈತ ಶುಭಕರಣ್​ ಸಿಂಗ್​ ಅವರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಹಾಗೂ ಆತನ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಘೋಷಿಸಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಮಾನ್​, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತನ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

    ಘಟನೆಯ ಹಿನ್ನಲೆ

    ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖನೌರಿ ಗಡಿಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಮೃತಪಟ್ಟಿದ್ದರು. ಘಟನೆಯಲ್ಲಿ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪ್ರತಿಭಟನಾನಿರತ ರೈತರು ಬ್ಯಾರಿಕೇಡ್‌ಗಳತ್ತ ಮುನ್ನುಗ್ಗಲು ಯತ್ನಿಸಿದಾಗ ಘರ್ಷಣೆ ನಡೆದಿತ್ತು. ಅವರನ್ನು ಚದುರಿಸಲು ಹರಿಯಾಣ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದರು.

    ಇದನ್ನೂ ಓದಿ: ಒಂದೇ ಓವರ್​ನಲ್ಲಿ ಸತತ ಆರು ಸಿಕ್ಸರ್; ದೇಶೀಯ ಕ್ರಿಕೆಟ್​ನಲ್ಲಿ ಹೊಸ ಸಾಧನೆ ಮಾಡಿದ ಯುವ ಬ್ಯಾಟ್ಸ್​ಮನ್

    ಈ ವೇಳೆ ಆವರಿಸಿದ ದಟ್ಟ ಹೊಗೆಯಿಂದ ಪಾರಾಗಲು ರೈತರು ಮುಖಗವಸು ಹಾಗೂ ಕನ್ನಡಕಗಳನ್ನು ತೊಟ್ಟು ಸುರಕ್ಷಿತ ಸ್ಥಳಗಳತ್ತ ಓಡಲು ಶುರು ಮಾಡಿದ್ದಾರೆ. ಈ ವೇಳೆ ಅಖಿಲ ಭಾರತ ಕಿಸಾನ್‌ ಸಭಾದ (AIKS) ಸಂಘಟನೆಯ ಮುಖಂಡ ಶುಭಕರಣ್​ ಸಿಂಗ್​ಗೆ ಗುಂಡು ತಗುಲಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದರು.

    ಖನೌರಿಯಲ್ಲಿ ನಡೆದ ಘರ್ಷಣೆಯಲ್ಲಿ ಪ್ರತಿಭಟನಾನಿರತ ರೈತ ಮೃತಪಟ್ಟ ಹಿನ್ನೆಲೆಯಲ್ಲಿ ರೈತ ಮುಖಂಡರು ಬುಧವಾರದಿಂದ ಎರಡು ದಿನಗಳ ಕಾಲ ‘ದೆಹಲಿ ಚಲೋ’ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದರು. ಪ್ರತಿಭಟನೆಗೆ ಸಂಬಂಧಿಸಿ ಮುಂದಿನ ಕ್ರಮಗಳ ಕುರಿತು ಶುಕ್ರವಾರ ಸಂಜೆ ನಿರ್ಧರಿಸಲಾಗುವುದು ಎಂದು ರೈತ ಮುಖಂಡ ಸರವಣ ಸಿಂಗ್‌ ಪಂಢೇರ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts