ಸನಾತನ ಹೇಳಿಕೆ: ಉದಯನಿಧಿ ಸ್ಟಾಲಿನ್‌ಗೆ ಕಪಾಳಮೋಕ್ಷ ಮಾಡಿದ್ರೆ 10 ಲಕ್ಷ ರೂ. ಬಹುಮಾನ!

Stalin son
Published on

- ಹಿಂದೂ ಸಂಸ್ಥೆಯೊಂದರ ಪೋಸ್ಟರ್ ವೈರಲ್

ನವದೆಹಲಿ: ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಅವರ ಪುತ್ರ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಟೀಕೆಗಳ ಕುರಿತು ಹಿಂದೂ ಸಂಘಟನೆಯು ಸಂಚಲನ ಮೂಡಿಸಿದೆ. ಈ ಕುರಿತಾಗಿ ಈಗಾಗಲೇ ಸೋಶಿಯಲ್​​ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗಿದೆ.

ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಕಪಾಳಮೋಕ್ಷ ಮಾಡಿದವರಿಗೆ ಜನ ಜಾಗರಣ ಸಮಿತಿ ಎಂಬ ಚಾರಿಟಿ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದೆ.

ಸ್ಟಾಲಿನ್ ಮಗನಿಗೆ ಕಪಾಳಮೋಕ್ಷ ಮಾಡಲು Rs10 ಲಕ್ಷ ಬಹುಮಾನ ನೀಡುವುದಾಗಿ ಹಿಂದೂ ಸಂಘಟನೆಯೊಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ಈ ವಿಷಯವಾಗಿ ಪೋಸ್ಟರ್‌ಗಳನ್ನು ಹಾಕಿತ್ತು. ಈ ಪೋಸ್ಟ್​​ರ್​ ಎಲ್ಲಡೆ ವೈರಲ್​​ ಆಗಿದೆ.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಮಾತನಾಡಿ, ಸನಾತನ ಧರ್ಮ ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ವಿರುದ್ಧವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕು ಎನ್ನುವ ಹೇಳಿಕೆ ನೀಡಿರುವ ಉದಯನಿಧಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುವುದಾಗಿ ಇಸ್ಕಾನ್-ಕೋಲ್ಕತ್ತಾ ಉಪಾಧ್ಯಕ್ಷ ರಾಧಾರಾಮನ್ ದಾಸ್ ಹೇಳಿದ್ದಾರೆ.

ಏನಿದು ವಿವಾದ?: ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ನಂತರ ವಿವಾದ ಭುಗಿಲೆದ್ದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net