21.7 C
Bengaluru
Tuesday, January 21, 2020

ಕೆರೆ ಅಭಿವೃದ್ಧಿಗೆ 11 ಕೋಟಿ ರೂ. ಪ್ರಸ್ತಾವನೆ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಶಿಗ್ಗಾಂವಿ: ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ನಾಗನೂರು ಕೆರೆಯ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರಕ್ಕೆ ಒಂದು ಕೋಟಿ ಮತ್ತು ಕೇಂದ್ರಕ್ಕೆ 10 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದ ನಾಗನೂರು ಕೆರೆ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಸೋಮವಾರ ಜರುಗಿದ ವಿಶೇಷ ಪೂಜೆ, ಬಾಗಿನ ಅರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ನಾಲ್ಕು ವರ್ಷದ ಬರಗಾಲದ ಛಾಯೆಯಿಂದ ವರದಾ ನದಿಯಿಂದ ನೀರು ಹರಿಸಿದರೂ, ತುಂಬಿ ಕೋಡಿ ಹರಿಯದ ನಾಗನೂರು ಕೆರೆ ಪ್ರಸಕ್ತ ವರ್ಷ ವರದೆ ಮತ್ತು ವರುಣನ ಕೃಪೆಯಿಂದ ಮೈದುಂಬಿ ಹರಿಯುತ್ತಿದೆ. ಎರಡು ವರ್ಷ ಪಟ್ಟಣದ ಜನತೆ ಕುಡಿಯುವ ನೀರಿನ ಸಮಸ್ಯೆಯಿಂದ ಮುಕ್ತರಾಗುತ್ತಾರೆ ಎಂದರು.

ಸುಮಾರು 15 ವರ್ಷಗಳಿಂದ ಬರಿದಾಗಿದ್ದ ಪಟ್ಟಣದ ಹೃದಯ ಭಾಗದ ಹಿರೇಕೆರೆಗೆ ವರದಾ ನದಿಯಿಂದ ನೀರು ಹರಿಸಿ ತುಂಬಿಸಲಾಗುತ್ತಿದೆ. ಶೀಘ್ರದಲ್ಲಿ ಅವಳಿ ಕೆರೆಗಳಾದ ರಾಚನಕಟ್ಟಿ, ಮತ್ತು ಹಿರೇಕೆರೆ ಭರ್ತಿಯಾಗಲಿದೆ ಎಂದರು.

ನವೆಂಬರ್​ನಲ್ಲಿ ಕೆರೆ ಉತ್ಸವ ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ತಾಲೂಕಿನಾದ್ಯಂತ ಕೆರೆ ಹೂಳು ತೆಗೆಯುವ ಮತ್ತು ನದಿ ನೀರು ಹರಿಸುವ ಯೋಜನೆಗೆ ಸಹಕರಿಸಿದ ರೈತರು ಹಾಗೂ ಸಂಘ- ಸಂಸ್ಥೆಗಳನ್ನು ಗೌರವಿಸಲಾಗುವುದು. ತಜ್ಞರಿಂದ ಕೆರೆಗಳ ಮಹತ್ವ ತಿಳಿಸುವ ಪ್ರಯತ್ನ ನಡೆಸಲಾಗಿದೆ. ತಾಲೂಕಿನಲ್ಲಿ ಈಗಾಗಲೇ 46 ಕೆರೆಗಳಿಗೆ ವರದಾ ನದಿ ಮೂಲಕ ನೀರು ಹರಿಸಿ ತುಂಬಿಸಲಾಗಿದೆ. ಎರಡನೇ ಹಂತದಲ್ಲಿ ಶಿಗ್ಗಾಂವಿಯ 22, ಸವಣೂರಿನ 48 ಕೆರೆಗಳಿವೆ. ನೀರು ಹರಿಸುವ ಕಾಮಗಾರಿ ಪ್ರಸಕ್ತ ವರ್ಷ ಪೂರ್ಣಗೊಳ್ಳಲಿದೆ ಎಂದರು.

ಭರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಸಂಸ್ಥೆಯ ಮೂಲಕ ಅನೇಕ ಕೆರೆಗಳ ಹೂಳು ತೆಗೆಯುವ ಕಾರ್ಯ ಕೈಗೊಳ್ಳಲಾಗಿದೆ. ಜನರು ಕೆರೆಗಳು ನಮ್ಮ ಆಸ್ತಿ ಎಂದು ಭಾವಿಸಬೇಕಿದೆ. ಜೊತೆಗೆ ಸರ್ಕಾರ ಕೆರೆ ಇಲ್ಲದ ಗ್ರಾಮದಲ್ಲಿ ನೂತನ ಕೆರೆ ನಿರ್ವಣಕ್ಕೆ ಯೋಜನೆ ರೂಪಿಸಬೇಕು ಎಂದರು.

ವಿರಕ್ತಮಠದ ಸಂಗನಬಸವ ಶ್ರೀಗಳು ಆಶೀರ್ವಚನ ನೀಡಿದರು. ಪುರಸಭೆ ಅದ್ಯಕ್ಷ ಶಿವಪ್ರಸಾದ ಸುರಗೀಮಠ, ಉಪಾಧ್ಯಕ್ಷ ಪರಶುರಾಮ ಸೊನ್ನದ, ಹಿರಿಯರಾದ ಶಂಕರಗೌಡ್ರ ಪಾಟೀಲ, ಸಣ್ಣಪ್ಪ ಬುಳ್ಳಕ್ಕನವರ, ಜಯಣ್ಣ ಹೆಸರೂರ, ಫಕ್ಕೀರಪ್ಪ ಕುಂದೂರ, ಹಾಗೂ ಪುರಸಭೆ ಸದಸ್ಯರು ಹಾಗೂ ಹಿರಿಯರು ಉಪಸ್ಥಿತರಿದ್ದರು. ಪುರಸಭೆ ಸದಸ್ಯ ಸುಭಾಷ ಚವ್ಹಾಣ ನಿರ್ವಹಿಸಿದರು.

ಇದಕ್ಕೂ ಪೂರ್ವದಲ್ಲಿ ಬಾಗೀನವನ್ನು ಮೆರವಣಿಗೆ ಮೂಲಕ ನಾಗನೂರು ಕೆರೆಗೆ ತಂದು ವಿಶೇಷ ಪೂಜೆ ನಡೆಸಿ ಅರ್ಪಿಸಲಾಯಿತು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...