

ಬೆಂಗಳೂರು: ಪವರ್ ಸಪ್ಲೈ ಅಪ್ಗ್ರೇಡ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಇಂದು (ಮಾ.18) ಬಲೆಗೆ ಕೆಡವಿದ್ದಾರೆ.
ಬಂಧಿತ ಅಧಿಕಾರಿಗಳನ್ನು ಬೆಸ್ಕಾಂ ಎಇಇ ಭಾರತಿ ಹಾಗೂ ಎಇ ಕುನಾಲ್ ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರೂ ಕೂಡ ಸುಮನಹಳ್ಳಿ ಬೆಸ್ಕಾಂ ಉಪವಿಭಾಗದ ಅಧಿಕಾರಿಗಳು.
ಪವರ್ ಸಪ್ಲೈ ಅಪ್ಗ್ರೇಡ್ಗಾಗಿ ದೂರುದಾರ ಅನಂತ ರಾಜು ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಕೆಲಸ ಮಾಡಿಕೊಡಲು 25 ಸಾವಿರ ರೂ. ಲಂಚ ಕೊಡುವಂತೆ ಇಬ್ಬರು ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ಅನಂತರಾಜು ದೂರು ನೀಡಿದ್ದರು.
ದೂರಿನ ಅನ್ವಯ ಇಬ್ಬರೂ ಅಧಿಕಾರಿಗಳಿಗೆ ಬಲೆ ಬೀಸಿದ ಲೋಕಾಯುಕ್ತ ಪೊಲೀಸರು ಲಂಚ ಸ್ವೀಕರಿಸುವ ವೇಳೆ ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್)