More

    ಕಂತೆ ಕಂತೆ ನೋಟು ಪತ್ತೆ! ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರ ಬಂಧನ

    ವಿಶಾಖಪಟ್ಟಣಂ: ಸುಮಾರು 7.9 ಕೋಟಿ ರೂ. ಮೌಲ್ಯದ ನಕಲಿ ಹಣ ಹೊಂದಿದ್ದ ಇಬ್ಬರು ಆರೋಪಿಗಳನ್ನು ಆಂಧ್ರ ಪ್ರದೇಶ-ಒಡಿಶಾ ಗಡಿಯ ಸುಂಕಿ ಔಟ್​ಪೋಸ್ಟ್​ನಲ್ಲಿ ಪೊಲೀಸರು ಬಂಧಿಸಿ, ಹಣವನ್ನು ವಶಕ್ಕೆ ಪಡೆದಿದ್ದಾರೆ.

    ಪ್ರಾಥಮಿಕ ವರದಿಗಳ ಪ್ರಕಾರ ಆರೋಪಿಗಳು ಅಂತಾರಾಜ್ಯ ದಂಧೆಕೋರರು ಎಂಬುದಾಗಿ ತಿಳಿದುಬಂದಿದೆ. ಅವರಿಬ್ಬರು ಛತ್ತೀಸ್​ಗಢದ ರಾಯ್ಪುರದಿಂದ ಆಂಧ್ರದ ವಿಶಾಖಪಟ್ಟಣಂ ಬರುವಾಗ ಮಾರ್ಗ ಮಧ್ಯೆಯೇ ಬಂಧಿಸಲಾಗಿದೆ.

    ಖಚಿತ ಮಾಹಿತಿ ಮೇರೆಗೆ ಸುಂಕಿ ಔಟ್​ಪೋಸ್ಟ್​ನಲ್ಲಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ 500 ರೂ. ನೋಟಿನ ಕಂತೆಗಳ ಒಟ್ಟು 7.9 ಕೋಟಿ ರೂ. ನಕಲಿ ಹಣ ಪತ್ತೆಯಾಗಿದೆ.

    ಇದನ್ನೂ ಓದಿರಿ: ದೆಹಲಿಗೆ ಹೋಗ್ತೇನೆಂದು ಹೊರಟ ಸಚಿವ ರಮೇಶ್​ ಜಾರಕಿಹೊಳಿ ರಾತ್ರೋರಾತ್ರಿ ಹೋಗಿದ್ದು ಎಲ್ಲಿಗೆ..?

    ಇನ್ನು ಆಂಧ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಸಹ ಘೋಷಣೆಯಾಗಿದ್ದು, ಮಾರ್ಚ್​ 10ರಂದು ಮತದಾನ ನಡೆಯಲಿದೆ. ಇದರ ಬೆನ್ನಲ್ಲೇ ನಕಲಿ ಹಣ ಪತ್ತೆಯಾಗಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇದೀಗ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) 489ಎ, 489ಬಿ, 489ಸಿ ಮತ್ತು 120ಬಿ ಸೆಕ್ಷನ್​ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಆರೋಪಿಗಳು ಪೊಲೀಸ್​ ಕಸ್ಟಡಿಯಲ್ಲಿದ್ದು, ತನಿಖೆ ಆರಂಭವಾಗಿದೆ. ಇದೇ ವೇಳೆ ಆಂಧ್ರ, ಛತ್ತೀಸ್​ಗಢ ಮತ್ತು ಒಡಿಶಾ ಮೂರು ರಾಜ್ಯಗಳ ಪೊಲೀಸರು ತಂಡವೊಂದನ್ನು ರಚಿಸಿ ಗ್ಯಾಂಗ್​ನ ಉಳಿದ ಸದಸ್ಯರಿಗಾಗಿ ಬಲೆ ಬೀಸಿದೆ. (ಏಜೆನ್ಸೀಸ್​)

    ತುರ್ತಪರಿಸ್ಥಿತಿ ಹೇರಿದ್ದು, ಆ ಸಂದರ್ಭದಲ್ಲಿ ನಡೆದಿದ್ದೆಲ್ಲ ತಪ್ಪೆಂದ ರಾಹುಲ್ ಗಾಂಧಿ

    ಬಿಜೆಪಿ ಸಂಸದನ ಮಗನ ಮೇಲೆ ಗುಂಡಿನ ದಾಳಿ: ಪೊಲೀಸರ ಅನುಮಾನವೇ ಬೇರೆ!

    ಲಿವ್​ಇನ್ ಸಂಬಂಧ ರೇಪ್ ಆದೀತೇ? ಸುಪ್ರೀಂ ಕೋರ್ಟ್ ಪ್ರಶ್ನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts