25.7 C
Bangalore
Monday, December 16, 2019

ಪರಿಶಿಷ್ಟರ ಅನುದಾನ ದುರ್ಬಳಕೆ ಆರೋಪ

Latest News

ಅವಶ್ಯಕ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ

ವಿಜಯಪುರ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಭೂ ಒಡೆತನ ಯೋಜನೆಯಡಿ ಅವಶ್ಯಕವಿರುವ ಅನುದಾನ-ಜಮೀನು ಕುರಿತು ವಾರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲು ಕ್ರಮ...

ಕ್ರೀಡೆ, ಯೋಗಕ್ಕೆ ಆದ್ಯತೆ ನೀಡಿ

ಹುನಗುಂದ: ಮಾನಸಿಕ ನೆಮ್ಮದಿಯೊಂದಿಗೆ ದೇಹಕ್ಕೆ ಹೊಸ ಉಲ್ಲಾಸ ನೀಡುವ ಕ್ರೀಡೆ ಹಾಗೂ ಯೋಗ ಮಾಡಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ವಿಜಯ ಮಹಾಂತೇಶ...

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ತಮ್ಮ ಪ್ರಜೆಗಳನ್ನು ವಾಪಸ್​ ಕರೆಯಿಸಿಕೊಳ್ಳಲು ಸಿದ್ಧ ಎಂದ ಬಾಂಗ್ಲಾದೇಶ

ಢಾಕಾ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ವಾಪಸ್ ಪಡೆಯಲು ಸಿದ್ದವಿರುವುದಾಗಿ ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೆಮೊನ್ ಹೇಳಿದ್ದಾರೆ. ಪೌರತ್ವ ಕಾಯ್ದೆ...

ಪೌರತ್ವ ತಿದ್ದುಪಡಿ ಮಸೂದೆ ತಿರಸ್ಕರಿಸಲು ಒತ್ತಾಯ

ವಿಜಯಪುರ: ಪೌರತ್ವ ತಿದ್ದುಪಡಿ ಮಸೂದೆ-2019 ತಿರಸ್ಕರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ೆಡರೇಷನ್ (ಎಸ್‌ಎ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎ್ಐ) ಕಾರ್ಯಕರ್ತರು...

ಅಲ್ಪಸಂಖ್ಯಾತ ಸಂಸ್ಥೆಗಳ ಅಧಿಕಾರ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಸಿಗಲಿ: ವಿಹಿಂಪ ಆಗ್ರಹ

ನವದೆಹಲಿ: ಸಂವಿಧಾನಕ್ಕೆ ತಿದ್ದುಪಡಿ ತಂದಾದರೂ ಸರಿ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿರುವ ಹಕ್ಕುಗಳನ್ನು ದೇಶದಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ನೀಡಬೇಕು ಎಂದು ವಿಶ್ವ...

ಚಿಕ್ಕಮಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪರಿಶಿಷ್ಟರ ಮೀಸಲಾತಿ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಜಿಪಂ ಎದುರು ಪ್ರತಿಭಟನೆ ನಡೆಸಿದವು.

ಡಿಎಸ್​ಎಸ್ ಮುಖಂಡ ದಂಟರಮಕ್ಕಿ ಶ್ರೀನಿವಾಸ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅನೇಕ ಕಾಲನಿಗಳಲ್ಲಿ ಕಾಂಕ್ರಿಟ್ ರಸ್ತೆಗಳೇ ಆಗಿಲ್ಲ. ಆದರೆ ಬಿಲ್ ಪಾವತಿಸಲಾಗಿದೆ. ಕಳಸ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಇನ್ನೂ ಆರಂಭವೇ ಆಗಿಲ್ಲ. ಅದಕ್ಕೂ ಕಾಮಗಾರಿ ಮುಗಿದಿದೆ ಎಂದು ಷರಾ ಬರೆದು 74 ಲಕ್ಷ ರೂ. ಬಿಲ್ ನೀಡಲಾಗಿದೆ ಎಂದು ಆರೋಪಿಸಿದರು.

ಮೂಡಿಗೆರೆ ತಾಲೂಕಿನ ಬಣಕಲ್, ಸಂಸೆ ಸೇರಿ ಹತ್ತಾರು ಹಳ್ಳಿಗಳಲ್ಲಿ ಕಾಂಕ್ರಿಟ್ ರಸ್ತೆ ನಿರ್ವಿುಸಿರುವುದು ದಾಖಲೆಯಲ್ಲಿದೆ. ಆದರೆ ಸ್ಥಳ ಪರಿಶೀಲಿಸಿದರೆ ಅಲ್ಲಿ ರಸ್ತೆಯೇ ಇಲ್ಲ. ಆದರೂ ಈ ಎಲ್ಲ ಕಾಮಗಾರಿಗಳಿಗೆ ಇಲಾಖೆಯಿಂದ ಬಿಲ್ ನೀಡಲಾಗಿದೆ. ಅದು ಹೇಗೆ ಸಾಧ್ಯ? ಎಂದು ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್ ಅವರನ್ನು ಪ್ರಶ್ನಿಸಿದರು.

ಅಧಿಕಾರಿ ಮಲ್ಲಿಕಾರ್ಜುನ್ ಪ್ರತಿಕ್ರಿಯಿಸಿ, ಈ ಕಾಮಗಾರಿಗಳನ್ನು ಪಿಆರ್​ಇಡಿ ಅಥವಾ ನಿರ್ವಿುತಿ ಕೇಂದ್ರ ನಿರ್ವಹಿಸಿವೆ. ಬಹುಶಃ ದಾಖಲೆಗಳ ಆಧಾರದಲ್ಲಿ ಬಿಲ್ ಪಾವತಿಸಿರಬಹುದು. ಸಂಘಟನೆಗಳ ಮುಖಂಡರು ನನ್ನ ಜತೆ ಬಂದರೆ ಎಲ್ಲೆಲ್ಲಿ ಅಕ್ರಮ ನಡೆದಿದೆ ಎಂಬ ಬಗ್ಗೆ ಸ್ಥಳ ಪರಿಶೀಲಿಸಿ, ಕಾಮಗಾರಿಗಳಲ್ಲಿ ಲೋಪ ಕಂಡುಬಂದರೆ ಅಂತಹ ಅಧಿಕಾರಿಗಳ ವಿರುದ್ಧ ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.

ಡಿಎಸ್​ಎಸ್ ಮುಖಂಡರಾದ ಅಂಗಡಿ ಚಂದ್ರು, ಮಂಜುನಾಥ್, ಕೆ.ಪಿ.ರಾಜರತ್ನಂ, ಸಿದ್ದರಾಜು ಇತರರಿದ್ದರು.

- Advertisement -

Stay connected

278,757FansLike
589FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...