More

    ಸ್ಟಾಫ್​ ನರ್ಸ್​ಗಳಿಗೆ ಹೆಚ್ಚುವರಿ 8,000 ರೂ. ಕೋವಿಡ್​ ಭತ್ಯೆ : ಸಿಎಂ

    ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಜಿಲ್ಲೆಗಳ ಸ್ಟಾಫ್ ನರ್ಸ್​​ಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಪ್ರಸ್ತುತ ಸಂಕಷ್ಟದ ಪರಿಸ್ಥಿತಿಯಲ್ಲಿ ಅಪಾಯವನ್ನು ಲೆಕ್ಕಿಸದೆ, ಸೋಂಕಿತರ ಶುಶ್ರೂಷೆಯಲ್ಲಿ ನಿರತರಾಗಿರುವ ಎಲ್ಲ ಸ್ಟಾಫ್ ನರ್ಸ್‍ಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ವೈಯಕ್ತಿಕ ಕಷ್ಟ-ನಷ್ಟಗಳನ್ನು ಬದಿಗೊತ್ತಿ, ಕುಟುಂಬದವರಿಂದ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರ ಕರ್ತವ್ಯಪ್ರಜ್ಞೆ ಅನುಕರಣೀಯ ಎಂದರು.

    ಪ್ರಸ್ತುತ ರಾಜ್ಯದಲ್ಲಿ ಒಟ್ಟು 21,574 ಸ್ಟಾಫ್ ನರ್ಸ್‍ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕಾರ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಾಸಿಕ ವೇತನದ ಜೊತೆಗೆ ಹೆಚ್ಚುವರಿಯಾಗಿ 8,000 ರೂ.ಗಳ ವಿಶೇಷ ಕೋವಿಡ್ ಭತ್ಯೆ ಸಹ ನೀಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಸ್ಟಾಫ್ ನರ್ಸ್​​ಗಳ ಕರ್ತವ್ಯ ನಿರ್ವಹಣೆ, ಆರೋಗ್ಯದ ಸ್ಥಿತಿಗತಿ ಮತ್ತಿತರ ವಿಷಯಗಳ ಕುರಿತು ಮುಖ್ಯಮಂತ್ರಿಗಳು ಚರ್ಚಿಸಿದರು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ಆರೋಗ್ಯ ಇಲಾಖೆ ಆಯುಕ್ತ ಡಾ. ಕೆ.ವಿ.ತ್ರಿಲೋಕಚಂದ್ರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದರು.

    ಇದನ್ನೂ ಓದಿ: “ಕೇಜ್ರಿವಾಲ್ ಸರ್ಕಾರ ಕರೊನಾ ಸಾವಿನ ಅಸಲಿ ಸಂಖ್ಯೆಯನ್ನು ಮರೆಮಾಚಿದೆ”

    ಕೋವಿಡ್ 19 ನಿಂದ ಮೃತಪಟ್ಟ ಸ್ಟಾಫ್ ನರ್ಸ್‍ಗಳಿಗೆ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ವಿಮಾ ಯೋಜನೆ” ಯ ಅಡಿಯಲ್ಲಿ 50 ಲಕ್ಷ ರೂ.ಗಳನ್ನು ನೀಡುವ ಸೌಲಭ್ಯವಿದ್ದು, ಈವರೆಗೆ ಆರು ಅರ್ಜಿಯನ್ನು ಸ್ವೀಕರಿಸಲಾಗಿದೆ. ಇದರಲ್ಲಿ, ಮೂರು ಪ್ರಕರಣಗಳಿಗೆ ವಿಮಾ ಮೊತ್ತ ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳಿಗೆ ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು. ಕೋವಿಡ್ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸ್ಟಾಫ್ ನರ್ಸ್‍ಗಳ ಸುರಕ್ಷತೆಗಾಗಿ ಅಗತ್ಯ ತರಬೇತಿ, ಸ್ವಯಂ ರಕ್ಷಣಾ ಸಾಧನಗಳಾದ ಪಿಪಿಈ ಕಿಟ್, ಗ್ಲೋವ್​​ಗಳು, ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಸ್ಯಾನಿಟೈಸರ್​​ಗಳನ್ನು ಅಗತ್ಯ ಪ್ರಮಾಣದಲ್ಲಿ ಒದಗಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

    ಬೀದರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಂತೋಷ್, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವಹೀದಾ, ದಾವಣಗೆರೆ ಚಿಗಟೇರಿ ಆಸ್ಪತ್ರೆಯ ಎಂ.ಡಿ.ಶಾರದಾ, ಬಾದಾಮಿ ತಾಲ್ಲೂಕು ಆಸ್ಪತ್ರೆಯ ರೇಣುಕಾ ಗೂಗಿಹಾಳ, ಕೋಲಾರ ಎಸ್.ಎನ್.ಆರ್. ಜಿಲ್ಲಾ ಆಸ್ಪತ್ರೆಯ ಶಶಿಕಲಾ, ರಾಯಚೂರು ವೈದ್ಯಕೀಯ ಕಾಲೇಜಿನ ರಾಚೋಟಿ ವಾರದ, ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಪ್ರದೀಪ್ ಕುಮಾರ್, ವಿಜಯಪುರ ಜಿಲ್ಲಾ ಆಸ್ಪತ್ರೆಯ ಪುಷ್ಪರಾಜ್, ಹರಿಹರ ಸಾರ್ವಜನಿಕ ಆಸ್ಪತ್ರೆಯ ಶ್ವೇತಾ ಆರ್. ಮತ್ತು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಸಂಧ್ಯಾರಾಣಿ ಸಂವಾದದಲ್ಲಿ ಭಾಗವಹಿಸಿದರು.

    ಸೆಂಟ್ರಲ್ ವಿಸ್ತಾ ಅವೆನ್ಯೂ ​​ನಿರ್ಮಾಣ ಕಾರ್ಯಕ್ಕೆ ತಡೆ ಇಲ್ಲ : ದೆಹಲಿ ಹೈಕೋರ್ಟ್

    VIDEO | ಸಂಗೀತ ನುಡಿಸುವ ಘೇಂಡಾಮೃಗ ನೋಡಿದ್ದೀರಾ ? ಇದೋ ಇಲ್ಲಿದೆ…

    ಮಹಾಮಾರಿಯಿಂದ ರಕ್ಷಣೆಗೆ ‘ಕರೊನಾ ದೇವಿ’ ವಿಗ್ರಹ ಪ್ರತಿಷ್ಠಾಪನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts