ಪುತ್ತೂರು ಆರ್‌ಟಿಒಗೆ ಸಾರಿಗೆ ಇಲಾಖೆ ಆಯುಕ್ತ ಭೇಟಿ

PTR_26 SEP_2
Published on

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಆರ್‌ಟಿಒ ಕಚೇರಿಗೆ ಭೇಟಿ ಮಾಡಿದ್ದು, ಬಂಟ್ವಾಳ ಹಾಗೂ ಪುತ್ತೂರು ಕಚೇರಿಗೆ ಬಂದಿದ್ದೇವೆ. ಮುಂಡೂರಿನಲ್ಲಿ ಆರ್‌ಟಿಒ ಟ್ರ್ಯಾಕ್ ನಿರ್ಮಾಣವಾಗುವ ಜಾಗದ ಪರಿಶೀಲನೆ, ಮರಗಳ ಕಡಿತದ ತೊಡಕುಗಳ ಮಾಹಿತಿ ತಿಳಿದುಕೊಳ್ಳುವ ನಿಟ್ಟಿನಲ್ಲಿ ಪುತ್ತೂರಿಗೆ ಭೇಟಿ ನೀಡಿದ್ದೇವೆ ಎಂದು ಸಾರಿಗೆ ಇಲಾಖೆ ಆಯುಕ್ತ ಯೋಗೀಶ್ ಎ.ಎಂ. ಹೇಳಿದರು.

ಉಡುಪಿಯಲ್ಲಿ ನಿರ್ಮಾಣವಾದ ನೂತನ ಟ್ರ್ಯಾಕ್‌ನಲ್ಲಿ ಸೆನ್ಸಾರ್ ಸಮಸ್ಯೆ ಹಾಗೂ ಸಾಫ್ಟ್‌ವೇರ್ ಸಮಸ್ಯೆಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ. ಗ್ರಾಮೀಣ ಭಾಗದ ಖಾಸಗಿ ಬಸ್ ಸಮಯದ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳೂ ಈ ಬಗ್ಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ ಎಂದರು.

ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ, ಜಂಟಿ ಸಾರಿಗೆ ಆಯುಕ್ತ ಭೀಮನ ಗೌಡ ಪಾಟೀಲ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಚ್. ವಿಶ್ವನಾಥ ಅಜಿಲ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net