ದಾಸನೂರು ಶಾಲೆಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ?

1 Min Read
ದಾಸನೂರು ಶಾಲೆಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ?
ನಂಜನಗೂಡು ತಾಲೂಕಿನ ದಾಸನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಪಿ.ಪ್ರಕಾಶ್, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪಾಲಕರೊಂದಿಗೆ ಬಿಇಒ ಶಿವಲಿಂಗಯ್ಯ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದರು.

ನಂಜನಗೂಡು: ತಾಲೂಕಿನ ದಾಸನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ಕ್ರಮ ಕೈಗೊಳ್ಳುವಂತೆ ಪಾಲಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ಪ್ರಭಾರ ಮುಖ್ಯ ಶಿಕ್ಷಕ ಪಿ.ಪ್ರಕಾಶ್ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂದು ವಿದ್ಯಾರ್ಥಿನಿಯರು ಪಾಲಕರಿಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಲಕರು ಭೇಟಿ ನೀಡಿದಾಗ ಪಿ.ಪ್ರಕಾಶ್ ಶಾಲೆಯಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.


ಕೂಡಲೇ ಪೋಕ್ಸೋ ಅಡಿ ಪ್ರಕರಣ ದಾಖಲಿಸಿ ಮುಖ್ಯ ಶಿಕ್ಷಕನನ್ನು ಬಂಧಿಸಬೇಕು ಎಂದು ಪಾಲಕರು ಕವಲಂದೆ ಪೊಲೀಸ್ ಠಾಣೆಗೆ ಗುರುವಾರ ದೂರು ನೀಡಿದ್ದಾರೆ. ಜತೆಗೆ, ಶಿಕ್ಷಕನನ್ನು ಕೆಲಸದಿಂದ ವಜಾಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೂ ದೂರು ಸಲ್ಲಿಸಿದ್ದಾರೆ.


ಈ ಕುರಿತು ಮಾಹಿತಿ ನೀಡಿರುವ ಕ್ಷೇತ್ರಶಿಕ್ಷಣಾಧಿಕಾರಿ ಎ.ಟಿ.ಶಿವಲಿಂಗಯ್ಯ, ವಿಷಯ ತಿಳಿದ ಬಳಿಕ ಶಾಲೆಗೆ ಭೇಟಿ ನೀಡಿ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರ ಸಭೆ ನಡೆಸಿ ಇತರ ಶಿಕ್ಷಕರು ಮತ್ತು ಪಾಲಕರಿಂದ ಮಾಹಿತಿ ಕಲೆ ಹಾಕಿದ್ದೇನೆ. ಶಿಕ್ಷಕನ ವಿರುದ್ದ ಕ್ರಮ ವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.

See also  ಹೆಣ್ಣು ಬಳೆ ಹಾಕುವುದು ಅಬಲೆ ಸಂಕೇತವೇ? ಶಾಸಕ ತನ್ವೀರ್​ಗೆ ಪ್ರತಾಪ್​ ಸಿಂಹ ಹಿಗ್ಗಾಮುಗ್ಗಾ ತರಾಟೆ
Share This Article