ತರೀಕೆರೆ: ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ತಾಲೂಕಿನೆಲ್ಲೆಡೆ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಮನೆ ಮುಂದೆ ರಂಗೋಲಿ ಬಿಡಿಸಿ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಮಹಿಳೆಯರು ವಿಶೇಷ ಪೂಜೆ ನಡೆಸಿದರು. ಸಂಜೆ ವೇಳೆ ಮಕ್ಕಳು, ಮಹಿಳೆಯರು ಎಳ್ಳು ಬೆಲ್ಲ ಹಂಚಿ ಹಬ್ಬದ ಶುಭಾಶಯ ಕೋರಿದರು.
ಪಟ್ಟಣ ಸೇರಿ ತಾಲೂಕಿನ ವಿವಿಧ ಕಡೆಯ ದೇಗುಲಗಳಲ್ಲಿ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇತಿಹಾಸ ಪ್ರಸಿದ್ಧ ಅಮೃತಾಪುರದ ಶ್ರೀ ಅಮೃತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಅರ್ಚಕರಾದ ಗಿರೀಶ್ ಭಟ್ಟ, ಪ್ರಭುಸ್ವಾಮಿ ಹಾಗೂ ನವೀನ್‌ಸ್ವಾಮಿ ನೇತೃತ್ವದಲ್ಲಿ ಶ್ರೀ ಸ್ವಾಮಿಗೆ ರುದ್ರಾಭಿಷೇಕ, ಅಷ್ಟೋತ್ತರದೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ನೆರವೇರಿಸಲಾಯಿತು.
ದೇಗುಲ ಆವರಣದಲ್ಲಿರುವ ಶ್ರೀಶಾರದಾಂಬೆಗೆ ಪಂಚಾಮೃತ ಅಭಿಷೇಕ, ಶ್ರೀಸೂಕ್ತ, ದುರ್ಗಾಸೂಕ್ತ ಪಾರಾಯಣ, ಕುಂಕುಮಾರ್ಚನೆ, ಮಂಗಳಾರತಿ ನಡೆಸಿ ದೇವರ ದರ್ಶನ ಪಡೆದ ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗಿಸಲಾಯಿತು.
ಎಸಿ ಡಾ.ಕೆ.ಜೆ.ಕಾಂತರಾಜ್, ತಹಸೀಲ್ದಾರ್ ವಿಶ್ವಜೀತ ಮೆಹತಾ, ಅಮೃತೇಶ್ವರ ದಾಸೋಹ ಸಮಿತಿ ಅಧ್ಯಕ್ಷ ಎ.ವಿ.ಶೇಖರಪ್ಪ, ಮಾಜಿ ಅಧ್ಯಕ್ಷ ಎ.ಎಸ್.ಈಶ್ವರಪ್ಪ ಮತ್ತಿತರರಿದ್ದರು.
ಅಮೃತಾಪುರದಲ್ಲಿ ಶ್ರೀ ಸ್ವಾಮಿಗೆ ರುದ್ರಾಭಿಷೇಕ

ಬಿಸಿಲಲ್ಲಿ ಸೆಖೆ ತಾಳಲಾರದೆ ICE ನೀರು ಕುಡಿದ್ರೆ ಜೀವಕ್ಕೆ ಅಪಾಯ ಖಂಡಿತ! Summer Health
Summer Health: ನೀರು ಮನುಷ್ಯರಿಗೆ ಬಹಳ ಅವಶ್ಯಕ. ನಾವು ಅನ್ನ ತಿನ್ನದೆ ಬದುಕಬಹುದು, ಆದರೆ ನೀರು…
ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್? ಇಲ್ಲಿದೆ ನೋಡಿ ಉತ್ತರ | Summer
Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…
ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging
hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…