More

    ರುಡ್‌ಸೆಟ್ ವಾರ್ಷಿಕ ವರದಿ ಬಿಡುಗಡೆ

    ಬೆಳ್ತಂಗಡಿ: ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರುಡ್‌ಸೆಟ್ ಸಂಸ್ಥೆ ಅಧ್ಯಕ್ಷರೂ ಆಗಿರುವ ಡಾ.ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.

    2023-24ನೇ ಸಾಲಿನಲ್ಲಿ ಸಂಸ್ಥೆ ಕೈಗೊಂಡ ಚಟುವಟಿಕೆಗಳ ಕುರಿತು ಹೆಗ್ಗಡೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಂಸ್ಥೆ ವತಿಯಿಂದ ಕಳೆದ ಸಾಲಿನಲ್ಲಿ 762 ಶಿಬಿರಾರ್ಥಿಗಳಿಗೆ ವಿವಿಧ ತರಬೇತಿ ನೀಡಲಾಗಿದ್ದು, ಈ ಪೈಕಿ 577 ಮಂದಿ ಸ್ವಂತ ಉದ್ಯೋಗ ಆರಂಭಿಸಿದ್ದಾರೆ. ಪ್ರಸಕ್ತ ವರ್ಷ ಕೋಳಿ ಸಾಕಾಣಿಕೆ, ಎಂಬ್ರಾಯಿಡರಿ, ಫ್ಯಾಬ್ರಿಕ್ ಪೈಂಟಿಂಗ್ ಮತ್ತು ಮದುಮಗಳ ಶೃಂಗಾರ ಸಹಿತ ವಿವಿಧ ಹೊಸ ವಿಚಾರಗಳಿಗೆ ತರಬೇತಿ ನಡೆಯಲಿದೆ ಎಂದು ಹೇಳಿದರು.

    ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ, ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಂ.ಸುರೇಶ್, ಸಿಬ್ಬಂದಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts