More

    ನಿಯಮ ಪಾಲನೆಯಿಂದ ಅಪಘಾತ ಇಳಿಮುಖ – ಜಿಲ್ಲಾಧಿಕಾರಿ ಡಾ.ಎಂ.ಜಿ.ಹಿರೇಮಠ

    ಬೆಳಗಾವಿ: ರಸ್ತೆ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಜನರಿಗೆ ರಸ್ತೆ ಮತ್ತು ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಡಾ.ಎಂ.ಜಿ.ಹಿರೇಮಠ ಹೇಳಿದ್ದಾರೆ.

    ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ಕನ್ನಡ ಜಾನಪದ ಶಿಕ್ಷಣ ಸಂಸ್ಥೆ ಹಾಗೂ ಉತ್ಸವ ರಾಕ್ ಗಾರ್ಡನ್ ಸಮಿತಿ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಚನ್ನಮ್ಮ ವೃತ್ತದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ಪ್ರಸ್ತುತ ನಡೆಯುತ್ತಿರುವ ಕಾರ್ಯಕ್ರಮವು 7 ದಿನ ಜರುಗಲಿದೆ. ಜನರಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ಸಹಾಯಕವಾಗಲಿದೆ. ವಾಹನ ಚಾಲನೆ ಸಮಯದಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ರಸ್ತೆ ನಿಯಮಗಳೊಂದಿಗೆ ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.

    ಭಿತ್ತಿಪತ್ರ, ಹಾಡು, ಘೋಷವಾಕ್ಯಗಳ ಮೂಲಕ ಜಾಗೃತಿ ಮೂಡಿಸಲಾಯಿತು. ಚನ್ನಮ್ಮ ವೃತ್ತದಿಂದ ಪ್ರಾರಂಭವಾದ ಜಾಥಾ ಡಿಸಿ ಕಚೇರಿಯಿಂದ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ತಲುಪಿತು. ಡಿಸಿಪಿ ಚಂದ್ರಶೇಖರ ನೀಲಗಾರ, ಕೆಎಸ್‌ಆರ್‌ಪಿ ಕಮಾಂಡೆಂಟ್ ಹಂಜಾ ಹುಸೇನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ, ಕಾರ್ಯಕ್ರಮದ ಸಂಯೋಜಕ ಪ್ರದೀಪ ಮೇಲ್ಗಡೆ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ, ಕನ್ನಡ ಜಾನಪದ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ವೇದಾರಾಣಿ ದಾಸನೂರ, ಸುಸ್ಥಿರ ಅಭಿವೃದ್ಧಿ ತಜ್ಞ ಪ್ರಕಾಶ ಭಟ್, ಚಾಲಕರ ಸಮಿತಿ, ಡ್ರೈವಿಂಗ್ ಸ್ಕೂಲ್ ಮಾಲೀಕರು ಹಾಗೂ ಕೆಎಸ್‌ಆರ್‌ಪಿ ಸಿಬ್ಬಂದಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts