More

    ನಿಯಮ ಉಲ್ಲಂಘಿಸಿ ಭದ್ರಾ ನದಿ ಬಫರ್ ಜೋನ್​ನಲ್ಲಿ ಮರ ಕಡಿತಲೆ

    ಬಾಳೆಹೊನ್ನೂರು: ಪಶ್ಚಿಮಘಟ್ಟದ ಅತೀ ಸೂಕ್ಷ್ಮ ಪರಿಸರ ಪ್ರದೇಶದಲ್ಲಿ ವ್ಯಾಪಕವಾಗಿ ಅರಣ್ಯ ನಾಶವಾಗುತ್ತಿದೆ. ಕಳಸ ಅರಣ್ಯ ವ್ಯಾಪ್ತಿಯ ಕವನಹಳ್ಳ ಸಮೀಪ ಭದ್ರಾ ನದಿ ಜಲಾನಯನ ಉದ್ದಕ್ಕೂ ಬಫರ್ ಜೋನಿನಲ್ಲಿ ನಿಯಮ ಉಲ್ಲಂಘಿಸಿ ನೂರಾರು ಕಾಡು ಜಾತಿಯ ಮರಗಳನ್ನು ಕಡಿದು ಸಾಗಿಸಲಾಗುತ್ತಿದೆ ಎಂದು ಪ್ರಜಾಪ್ರಭುತ್ವ ಉಳಿಸಿ ಆಂದೋಲನ ವೇದಿಕೆ ಸಂಚಾಲಕ ನಾಗೇಶ್ ಆಂಗೀರಸ ದೂರಿದರು.

    ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ನಾಶ ತಡೆಯುವಲ್ಲಿ ಇಲಾಖೆ ವಿಫಲವಾಗಿದೆ. ಈ ಪ್ರಕರಣದ ಬಗ್ಗೆ ಮಧ್ಯಪ್ರವೇಶಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಟಿ.ಎಂ.ವಿಜಯ್ ಭಾಸ್ಕರ್ ಅವರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

    ಬಫರ್​ಜೋನ್​ನ ಇಳಿಜಾರಿನಲ್ಲಿ ಹಾಗೂ ನೀರಿನ ಮೂಲದ ಅಕ್ಕಪಕ್ಕದಲ್ಲಿರುವ ಮರಗಳನ್ನು ಕಡಿಯಬಾರದೆಂಬ ನಿಯಮವಿದ್ದರೂ ನಿಯಮವನ್ನು ಗಾಳಿಗೆ ತೂರಲಾಗಿದೆ. ಬಾಳೆಹೊನ್ನೂರು ಅರಣ್ಯ ಇಲಾಖೆ ವ್ಯಾಪ್ತಿಯ ಹುಯಿಗೆರೆ ಗ್ರಾಮದಲ್ಲಿ 86 ಎಕರೆ ಒತ್ತುವರಿ ತೆರವು ಮಾಡಲಾಗಿದೆ ಎಂದು ಕಂದಾಯ ಹಾಗೂ ಅರಣ್ಯ ಇಲಾಖೆಯಲ್ಲಿ ದಾಖಲೆ ಇದೆ. ಆದರೆ ಒತ್ತುವರಿ ತೋಟವು ಮಾಲೀಕರ ವಶದಲ್ಲೇ ಇದ್ದು ಈ ತೋಟದಲ್ಲಿ ನೂರಾರು ಮರಗಳನ್ನು ಕಡಿಯಲಾಗಿದೆ. ಬಫರ್ ಜೋನ್ ನಿಯಮ ಉಲ್ಲಂಘಿಸಿ ಮರ ಕಡಿಯಲಾಗಿದೆ. ಅಧಿಕಾರಿಗಳು ಈ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ದೂರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts