More

    ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಿ

    ಬೆಳಗಾವಿ: ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ನಿಯಂತ್ರಣಕ್ಕೆ ವಿಶೇಷಾಧಿಕಾರಿಗಳನ್ನು ನೇಮಿಸುವುದರ ಜತೆ ಕರೊನಾ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸಂಜೆ ಅಧಿಕಾರಿಗಳ ಜತೆ ಆಯೋಜಿಸಿದ್ದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳುವುದು ಬಹು ಮುಖ್ಯ. ಆದರೆ, ಸಾರ್ವಜನಿಕ ಸ್ಥಳ, ಮಾರುಕಟ್ಟೆ ಮತ್ತಿತರ ಕಡೆ ಕರೊನಾ ನಿಯಮ ಪಾಲನೆಯಾಗದಿರುವುದು ಕಂಡುಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಕೋವಿಡ್-19 ಮಾರ್ಗಸೂಚಿ ಅನುಷ್ಠಾನದ ಜತೆಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶೇಷಾಧಿಕಾರಿಗಳ ನೇಮಿಸಲು ನಿರ್ಧರಿಸಲಾಗಿದೆ. ನೇಮಕಗೊಂಡ ಅಧಿಕಾರಿಗಳು ತಮಗೆ ನಿಗದಿಪಡಿಸುವ ವ್ಯಾಪ್ತಿಯಲ್ಲಿ ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಕೋವಿಡ್ ಮಾರ್ಗಸೂಚಿ ಪಾಲನೆಯನ್ನು ಖಚಿತಪಡಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕು ಎಂದರು.

    ಪ್ರಚಾರಕ್ಕೆ ಕೋವಿಡ್ ಮಾರ್ಗಸೂಚಿ ಅನ್ವಯ: ಜಿಲ್ಲೆಯ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಎಂಟು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರಚಾರಸಭೆ ಮತ್ತಿತರ ಚಟುವಟಿಕೆಗಳಿಗೆ ಸಹಾಯಕ ಚುನಾವಣಾಧಿಕಾರಿಗಳು ಕೋವಿಡ್-19 ಮಾರ್ಗಸೂಚಿ ಅನುಸರಿಸಿ ಅನುಮತಿ ನೀಡಬೇಕು. ಅನುಮತಿ ನೀಡಿದ ಬಳಿಕ ಚುನಾವಣಾ ಪ್ರಚಾರದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆಯ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಡಾ.ಕೆ.ಹರೀಶಕುಮಾರ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್., ಡಿಸಿಪಿ ಚಂದ್ರಶೇಖರ ನೀಲಗಾರ, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts